ಮುಂಬರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ಪರ ಕಣಕ್ಕಿಳಿಯಲು ರೆಡಿ ಎಂದು ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್, ವೇಗಿ ನವದೀಪ್ ಸೈನಿ ಡೆಲ್ಲಿ ತಂಡಕ್ಕೆ ತಿಳಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ನವದೆಹಲಿ(ಸೆ.18): 2019ರ ವಿಜಯ್ ಹಜಾರೆ ಟ್ರೋಫಿಯಲ್ಲಿ ದೆಹಲಿ ತಂಡಕ್ಕೆ ತಾರಾ ಆಟಗಾರರ ಬಲ ಸಿಗಲಿದೆ. ಶಿಖರ್ ಧವನ್, ರಿಷಭ್ ಪಂತ್ ಹಾಗೂ ನವ್ದೀಪ್ ಸೈನಿ ಆಯ್ಕೆಗೆ ಲಭ್ಯರಿದ್ದಾರೆ ಎಂದು ದೆಹಲಿ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಜತ್ ಶರ್ಮಾ ತಿಳಿಸಿದ್ದಾರೆ.
ವಿಜಯ್ ಹಜಾರೆ ಟ್ರೋಫಿ: ರಾಜ್ಯದ ವೇಳಾಪಟ್ಟಿ ಪ್ರಕಟ
ದ.ಆಫ್ರಿಕಾ ವಿರುದ್ಧದ ಟಿ20 ಸರಣಿ ಸೆ.22ಕ್ಕೆ ಮುಕ್ತಾಯಗೊಳ್ಳಲಿದ್ದು, ವಿಜಯ್ ಹಜಾರೆ ಟ್ರೋಫಿ ಸೆ.24ರಿಂದ ಆರಂಭಗೊಳ್ಳಲಿದೆ. ಧವನ್ ಎಲ್ಲಾ ಪಂದ್ಯಗಳಿಗೆ ಲಭ್ಯರಾಗಲಿದ್ದು, ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೂ ಆಯ್ಕೆಯಾಗಿರುವ ಪಂತ್, ಆರಂಭದ ಕೆಲ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ದೆಹಲಿ ತನ್ನ ಮೊದಲ ಪಂದ್ಯದಲ್ಲಿ ವಿದರ್ಭ ತಂಡವನ್ನು ಎದುರಿಸಲಿದೆ. ಧವನ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರಿಂದ, ವಿಜಯ್ ಹಜಾರೆ ಟೂರ್ನಿಯಲ್ಲಿ ಡೆಲ್ಲಿ ಪರ ಕಣಕ್ಕಿಳಿಯಲಿದ್ದಾರೆ.
ವಿಜಯ್ ಹಜಾರೆ ಟ್ರೋಫಿಗೆ ದೆಹಲಿ ಸಂಭಾವ್ಯ ತಂಡ ಪ್ರಕಟ; ಕೊಹ್ಲಿಗೆ ಸ್ಥಾನ!
ಇನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ವೇಗಿ ಇಶಾಂತ್ ಶರ್ಮಾ ಕೂಡ ಡೆಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದು, ಸಾಧ್ಯವಾದರೆ ವಿಜಯ್ ಹಜಾರೆ ಟೂರ್ನಿಯಲ್ಲಿ ಡೆಲ್ಲಿ ತಂಡವನ್ನು ಪ್ರತಿನಿಧಿಸುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.