ಮಾಹಿ ಪಡೆಯನ್ನು ಮಣಿಸಿದ ಕರ್ನಾಟಕ

Published : Feb 25, 2017, 02:21 PM ISTUpdated : Apr 11, 2018, 12:40 PM IST
ಮಾಹಿ ಪಡೆಯನ್ನು ಮಣಿಸಿದ ಕರ್ನಾಟಕ

ಸಾರಾಂಶ

ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯ ತಂಡವನ್ನು ಮುನ್ನಡೆಸಿದ ಧೋನಿ, ತನ್ನ ತಂಡಕ್ಕೆ ಗೆಲುವು ತಂದುಕೊಡಲು ವಿಫಲವಾದರು.

ಕೋಲ್ಕತಾ(ಫೆ.25): ಬ್ಯಾಟಿಂಗ್ ಹಾಗೂ ಬೌಲಿಂಗ್‌'ನಲ್ಲಿ ಆಲ್ರೌಂಡ್ ಪ್ರದರ್ಶನ ನೀಡಿದ ಕರ್ನಾಟಕ ತಂಡ, ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು 5 ರನ್‌'ಗಳಿಂದ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ‘ಡಿ’ ಗುಂಪಿನ ಪಂದ್ಯದಲ್ಲಿ ಗೆಲುವಿಗೆ ಕರ್ನಾಟಕ ನೀಡಿದ್ದ 267 ರನ್ ಗುರಿಗೆ ಉತ್ತರವಾಗಿ ಎಂ.ಎಸ್. ಧೋನಿ ಸಾರಥ್ಯದ ಜಾರ್ಖಂಡ್ ಕಟ್ಟಕಡೆಯವರೆಗೂ ಹೋರಾಡಿ ಅಂತಿಮವಾಗಿ 49.5 ಓವರ್‌ಗಳಲ್ಲಿ 261 ರನ್‌'ಗೆ ಆಲೌಟ್ ಆಯಿತು.

ಇದರೊಂದಿಗೆ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯ ತಂಡವನ್ನು ಮುನ್ನಡೆಸಿದ ಧೋನಿ, ತನ್ನ ತಂಡಕ್ಕೆ ಗೆಲುವು ತಂದುಕೊಡಲು ವಿಫಲವಾದರು. ಭಾನುವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಸರ್ವೀಸಸ್ ವಿರುದ್ಧ ಕರ್ನಾಟಕ ಸೆಣಸಲಿದೆ.

ಸಂಕ್ಷಿಪ್ತ ಸ್ಕೋರ್

ಕರ್ನಾಟಕ: 266/10

(ಆರ್. ಸಮರ್ಥ್ 71, ಮನೀಶ್ ಪಾಂಡೆ 77; ರಾಹುಲ್ ಶುಕ್ಲಾ 47/2)

ಜಾರ್ಖಂಡ್: 261/10

(ಸೌರಭ್ ತಿವಾರಿ 68, ಧೋನಿ 43; ಗೌತಮ್ 58/4)

ಫಲಿತಾಂಶ:

ಕರ್ನಾಟಕಕ್ಕೆ 5 ರನ್ ಗೆಲುವು

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?