
ಬೆಂಗಳೂರು(ಅ.18): ವಿಜಯ್ ಹಜಾರೆ ಏಕದಿನ ಪಂದ್ಯಾವಳಿಯ ಫೈನಲ್‌ಗೆ ಮುಂಬೈ ತಂಡ ಪ್ರವೇಶಿಸಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಮುಂಬೈ, ಹೈದರಾಬಾದ್ ವಿರುದ್ಧ ವಿಜೆಡಿ ನಿಯಮದನ್ವಯ 60 ರನ್‌ಗಳ ಗೆಲುವು ದಾಖಲಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ ರೋಹಿತ್ ರಾಯುಡು (121) ಭರ್ಜರಿ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 246 ರನ್‌ಗಳಿಸಿತು. ಈ ಗುರಿ ಬೆನ್ನಟ್ಟಿದ ಮುಂಬೈ ಪೃಥ್ವಿ ಶಾ (61), ಶ್ರೇಯಸ್ ಅಯ್ಯರ್ (55) ರನ್ ನೆರವಿನಿಂದ 25 ಓವರ್‌ಗಳಲ್ಲಿ 2 ವಿಕೆಟ್‌ಗೆ 155 ರನ್‌ಗಳಿಸಿತು.
ಈ ವೇಳೆ ಮಳೆ ಸುರಿದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಗುರುವಾರ ನಡೆಯಲಿರುವ 2ನೇ ಸೆಮೀಸ್‌ನಲ್ಲಿ ದೆಹಲಿ ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಲಿವೆ. ಸಂಕ್ಷಿಪ್ತ ಸ್ಕೋರ್: ಹೈದರಾಬಾದ್ 246/8, ಮುಂಬೈ 155/2
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.