
ಓವಲ್(ಸೆ.07): ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ವಂಚಿಸಿ ಇಂಗ್ಲೆಂಡ್‌ನಲ್ಲಿ ಹಾಯಾಗಿ ಕಾಲಕಳೆಯುತ್ತಿರುವ ಉದ್ಯಮಿ ವಿಜಯ್ ಮಲ್ಯ ಬಂಧನಕ್ಕೆ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿತ್ತಿದೆ. ಆದರೆ ವಿಜಯ್ ಮಲ್ಯ ಲಂಡನ್‌ನಲ್ಲಿ ಹಾಯಾಗಿ ಕಾಲಕಳೆಯುತ್ತಿದ್ದಾರೆ.
ಇಂಗ್ಲೆಂಡ್ ಕೋರ್ಟ್ ವಿಚಾರಣೆಗೆ ಕಾಣಿಸಿಕೊಂಡ ಬಳಿಕ ನಾಪತ್ತೆಯಾಗಿದ್ದ ವಿಜಯ್ ಮಲ್ಯ ಇದೀಗ ಕ್ಯಾಮರ ಕಣ್ಣಿಗೆ ಸೆರೆಸಿಕ್ಕಿದ್ದಾರೆ. ಓವಲ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ವಿಜಯ್ ಮಲ್ಯ ಹಾಜರಾಗಿದ್ದಾರೆ.
ಸಂಗಡಿಗರ ಜೊತೆ ವಿಜಯ್ ಮಲ್ಯ ಓವಲ್ ಕ್ರೀಡಾಂಗಣಕ್ಕೆ ಎಂಟ್ರಿಕೊಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ಇಂಗ್ಲೆಂಡ್‌ಗೆ ಪಲಾಯನ ಮಾಡಿದ ಬಳಿಕ ಮಲ್ಯ , ಕಳೆದ ಜೂನ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದಕ್ಕೂ ಹಾಜರಾಗಿದ್ದರು.
ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನವೇ ವಿಜಯ್ ಮಲ್ಯ ಸದ್ದಿಲ್ಲದೇ ಹಾಜರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕರಾಗಿದ್ದ ಮಲ್ಯ, 2015ರಲ್ಲಿ ಅನಿವಾರ್ಯವಾಗಿ ಫ್ರಾಂಚೈಸಿಯನ್ನ ಮಾರಾಟ ಮಾಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.