ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕುಸ್ತಿಪಟು ವಿನೇಶ್‌ ಫೋಗಟ್‌

By Naveen KodaseFirst Published Apr 21, 2024, 12:31 PM IST
Highlights

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಪ್ರತಿಭಟನೆ ನಡೆಸಿ ಹಲವು ತಿಂಗಳುಗಳ ಕಾಲ ಕುಸ್ತಿ ಮ್ಯಾಟ್‌ನಿಂದ ದೂರವಿದ್ದ ವಿನೇಶ್‌, ಇತ್ತೀಚೆಗೆ ಭಾರತೀಯ ಕುಸ್ತಿ ಫೆಡರೇಶನ್‌ ನಡೆಸಿದ್ದ ಆಯ್ಕೆ ಟ್ರಯಲ್ಸ್‌ನಲ್ಲಿ ಮೊದಲ ಸ್ಥಾನ ಪಡೆದು ಒಲಿಂಪಿಕ್ಸ್‌ ಅರ್ಹತಾ ಟೂರ್ನಿಗೆ ಆಯ್ಕೆಯಾಗಿದ್ದರು. 

ಬಿಷ್ಕೆಕ್‌ (ಕಿರ್ಗಿಸ್ತಾನ): ಭಾರತದ ತಾರಾ ಕುಸ್ತಿಪಟು ವಿನೇಶ್‌ ಫೋಗಟ್‌ 2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಇಲ್ಲಿ ನಡೆಯತ್ತಿರುವ ಏಷ್ಯಾ ಒಲಿಂಪಿಕ್ಸ್‌ ಅರ್ಹತಾ ಟೂರ್ನಿಯ ಮಹಿಳೆಯರ 50 ಕೆ.ಜಿ. ವಿಭಾಗದಲ್ಲಿ ಫೈನಲ್‌ ಪ್ರವೇಶಿಸುವ ಮೂಲಕ ಅರ್ಹತೆ ಗಿಟ್ಟಿಸಿಕೊಂಡರು.

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಪ್ರತಿಭಟನೆ ನಡೆಸಿ ಹಲವು ತಿಂಗಳುಗಳ ಕಾಲ ಕುಸ್ತಿ ಮ್ಯಾಟ್‌ನಿಂದ ದೂರವಿದ್ದ ವಿನೇಶ್‌, ಇತ್ತೀಚೆಗೆ ಭಾರತೀಯ ಕುಸ್ತಿ ಫೆಡರೇಶನ್‌ ನಡೆಸಿದ್ದ ಆಯ್ಕೆ ಟ್ರಯಲ್ಸ್‌ನಲ್ಲಿ ಮೊದಲ ಸ್ಥಾನ ಪಡೆದು ಒಲಿಂಪಿಕ್ಸ್‌ ಅರ್ಹತಾ ಟೂರ್ನಿಗೆ ಆಯ್ಕೆಯಾಗಿದ್ದರು. ಇದೀಗ ವಿನೇಶ್‌ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡು, 3ನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಅಣಿಯಾಗಿದ್ದಾರೆ. ವಿನೇಶ್‌ 2016ರ ರಿಯೋ, 2020ರ ಟೋಕಿಯೋ ಒಲಿಂಪಿಕ್ಸ್‌ಗಳಲ್ಲೂ ಸ್ಪರ್ಧಿಸಿದ್ದರು.

ಐಸಿಸಿ ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ

57 ಕೆ.ಜಿ. ವಿಭಾಗದಲ್ಲಿ ಅನ್ಶು ಮಲಿಕ್‌, 76 ಕೆ.ಜಿ. ವಿಭಾಗದಲ್ಲಿ ರೀತಿಕಾ ಸಹ ಫೈನಲ್‌ ಪ್ರವೇಶಿಸಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದರು. 53 ಕೆ.ಜಿ. ವಿಭಾಗದಲ್ಲಿ ಅಂತಿಮ್‌ ಪಂಘಲ್‌ ಈ ಮೊದಲೇ ಅರ್ಹತೆ ಪಡೆದಿದ್ದರು.

ಭಾರತೀಯ ಕುಸ್ತಿ ಫೆಡರೇಶನ್‌ ಈ ಅರ್ಹತೆಗಳನ್ನೇ ಅಂತಿಮಗೊಳಿಸುತ್ತದೆಯೋ ಅಥವಾ ಮತ್ತೊಂದು ಸುತ್ತಿನ ಆಯ್ಕೆ ಟ್ರಯಲ್ಸ್‌ ನಡೆಸಿ ಬಳಿಕ ಒಲಿಂಪಿಕ್ಸ್‌ಗೆ ತಂಡ ಕಳುಹಿಸುತ್ತದೆಯೋ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದ 23 ಚೀನಿ ಸ್ವಿಮ್ಮರ್ಸ್‌ ಡೋಪ್ ಟೆಸ್ಟ್ ಫೇಲಾಗಿದ್ದವರು.

ಸಿಡ್ನಿ: ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ಫೇಲಾಗಿದ್ದ ಚೀನಾದ 23 ಈಜುಪಟುಗಳಿಗೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಆಸ್ಟ್ರೇಲಿಯಾದ ಪ್ರತಿಷ್ಠಿತ 'ದಿ ಡೈಲಿ ಟೆಲಿಗ್ರಾಫ್' ಪತ್ರಿಕೆ ಈ ಕುರಿತು ವರದಿ ಪ್ರಕಟಿಸಿದೆ.

ಟೋಕಿಯೋ ಒಲಿಂಪಿಕ್ಸ್‌ಗೂ ಮುನ್ನ ಅಭ್ಯಾಸ ಶಿಬಿರದ ವೇಳೆ ನಡೆಸಿದ ಪರೀಕ್ಷೆಯಲ್ಲಿ ಈಜುಪಟುಗಳು ನಿಷೇಧಿತ ಟ್ರೈ ಮೆಟಾಜಿದಿನ್ ಮದ್ದು ಸೇವಿಸಿದ್ದು ಪತ್ತೆಯಾಗಿತ್ತು. ಆದರೆ ಚೀನಾದ ಉದ್ದೀಪನಾ ಮದ್ದು ಸೇವನೆ ನಿಗ್ರಹ ಘಟಕವು ಈಜುಗಾರರ ರಕ್ತದ ಮಾದರಿಯು ಕಲುಷಿತಗೊಂಡಿತ್ತು ಎಂದು ಕ್ಲೀನ್ ಚಿಟ್ ನೀಡಿತ್ತು. ಈ ವಿಷಯ ವಿಶ್ವ ಉದ್ದೀಪನಾ ಮದ್ದು ಸೇವನೆ ನಿಗ್ರಹ ಘಟಕ(ವಾಡಾ) ಹಾಗೂ ವಿಶ್ವ ಈಜು ಸಂಸ್ಥೆಯ ಗಮನಕ್ಕೆ ಬಂದರೂ ಏನೂ ಕ್ರಮ ಕೈಗೊಳ್ಳಲಿಲ್ಲ ಎಂದು ವರದಿಯಲ್ಲಿ ಹೇಳಲಾಗಿತ್ತು.

ದುಬೈ ಮಳೆಗೆ ವಿಮಾನ ವಿಳಂಬ: ದೀಪಕ್‌, ಸುಜೀತ್‌ಗೆ ಒಲಿಂಪಿಕ್ಸ್‌ ಅರ್ಹತಾ ಟೂರ್ನಿ ಮಿಸ್‌!

2 ಬಾರಿ ಗ್ರ್ಯಾನ್‌ಸ್ಲಾಂ ವಿಜೇತೆ ಸ್ಪೇನ್‌ನ ಮುಗುರುಜಾ ಟೆನಿಸ್‌ಗೆ ಗುಡ್‌ಬೈ

ಮ್ಯಾಡ್ರಿಡ್‌: 2 ಬಾರಿ ಗ್ರ್ಯಾನ್‌ ಸ್ಲಾಂ ಪ್ರಶಸ್ತಿ ಗೆದ್ದಿದ್ದ ಸ್ಪೇನ್‌ನ ಗಾರ್ಬಿನ್‌ ಮುಗುರುಜಾ ಶನಿವಾರ ವೃತ್ತಿಪರ ಟೆನಿಸ್‌ನಿಂದ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.

30 ವರ್ಷದ ಮುಗುರುಜಾ, ತಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವ ಉದ್ದೇಶದಿಂದ ನಿವೃತ್ತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ. 2016ರ ಫ್ರೆಂಚ್‌ ಓಪನ್‌ ಫೈನಲ್‌ನಲ್ಲಿ ಸೆರೆನಾ ವಿಲಿಯಮ್ಸ್‌ ವಿರುದ್ಧ ಗೆದ್ದಿದ್ದ ಸ್ಪೇನ್‌ ಆಟಗಾರ್ತಿ, 2017ರ ವಿಂಬಲ್ಡನ್‌ ಫೈನಲ್‌ನಲ್ಲಿ ವೀನಸ್ ವಿಲಿಯಮ್ಸ್‌ ವಿರುದ್ಧ ಗೆದ್ದಿದ್ದರು.

ಗ್ರ್ಯಾನ್‌ಸ್ಲಾಂ ಫೈನಲ್‌ಗಳಲ್ಲಿ ವಿಲಿಯಮ್ಸ್‌ ಸಹೋದರಿಯಬ್ಬಿರನ್ನೂ ಸೋಲಿಸಿದ ಏಕೈಕ ಆಟಗಾರ್ತಿ ಎನ್ನುವ ಹಿರಿಮೆಗೆ ಮುಗುರುಜಾರದ್ದು. ಒಟ್ಟಾರೆ 10 ಪ್ರಶಸ್ತಿಗಳನ್ನು ಗೆದ್ದಿರುವ ಅವರು, 2015ರ ವಿಂಬಲ್ಡನ್‌, 2020ರ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ರನ್ನರ್‌-ಅಪ್‌ ಸ್ಥಾನ ಪಡೆದಿದ್ದರು.

click me!