
ಲಂಡನ್(ಆ.27): ಟೀಂ ಇಂಡಿಯಾ ಬಲಿಷ್ಠ ಬ್ಯಾಟಿಂಗ್ ಶಕ್ತಿಗೆ ಮುಖ್ಯ ಕಾರಣ ನಾಯಕ ವಿರಾಟ್ ಕೊಹ್ಲಿ. ಕೊಹ್ಲಿಯೇ ಭಾರತದ ತಂಡದ ಬೆನ್ನೆಲುಬು ಎಂದು ಪಾಕಿಸ್ತಾನ ಮಾಜಿ ಸ್ಪಿನ್ನರ್, ಇಂಗ್ಲೆಂಡ್ ತಂಡದ ಸ್ಪಿನ್ ಕೋಚ್ ಸಕ್ಲೈನ್ ಮುಷ್ತಾಕ್ ಹೇಳಿದ್ದಾರೆ.
ಸಚಿನ್ ತೆಂಡೂಲ್ಕರ್ ದಿಗ್ಗಜ ಬ್ಯಾಟ್ಸ್‌ಮನ್. ಸಚಿನ್ ಜೊತೆ ವಿರಾಟ್ ಕೊಹ್ಲಿಯನ್ನ ಹೋಲಿಕೆ ಮಾಡುವುದು ಸೂಕ್ತವಲ್ಲ. ಆದರೆ ಸಚಿನ್ ಹತ್ತಿರ ನಿಲ್ಲುವ ಬ್ಯಾಟ್ಸ್‌ಮನ್ ಎಂದರೆ ಅದು ವಿರಾಟ್ ಕೊಹ್ಲಿ ಮಾತ್ರ ಎಂದು ಮುಷ್ತಾಕ್ ಹೇಳಿದ್ದಾರೆ.
ಕೊಹ್ಲಿಯಲ್ಲಿ ರನ್ ದಾಹವಿದೆ. ಪ್ರತಿ ಪಂದ್ಯದಿಂದ ಪಂದ್ಯಕ್ಕೆ ವೀಕ್ನೆಸ್‌ಗಳನ್ನ ಸರಿಪಡಿಸಿಕೊಳ್ಳುವ ಗುಣವಿದೆ. ಕಠಿಣ ಅಭ್ಯಾಸ ಹಾಗೂ ಆತ್ಮವಿಶ್ವಾಸ ಕೊಹ್ಲಿಯ ಶಕ್ತಿ. ಹೀಗಾಗಿಯೇ ಕೊಹ್ಲಿ ವಿಶ್ವದ ಬೆಸ್ಟ್ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದಾರೆ ಎಂದು ಮುಷ್ತಾಕ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.