ಮತ್ತೊಂದು ದಾಖಲೆಗೆ ಸಜ್ಜಾಗಿದ್ದಾರೆ ವಿರಾಟ್ ಕೊಹ್ಲಿ

By Web DeskFirst Published Aug 24, 2018, 10:05 PM IST
Highlights

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಅಷ್ಟಕ್ಕೂ ಕೊಹ್ಲಿ ನಿರ್ಮಿಸಲಿರುವ ಹೊಸ ದಾಖಲೆ ಯಾವುದು? ಇಲ್ಲಿದೆ.

ಲಂಡನ್(ಆ.24): ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ವಿಶ್ರಾಂತಿಗೆ ಜಾರಿದ್ದ ಟೀಂ ಇಂಡಿಯಾ ಇದೀಗ ಅಭ್ಯಾಸ ಆರಂಭಿಸಿದೆ. ಈ ಮೂಲಕ 4ನೇ ಟೆಸ್ಟ್ ಪಂದ್ಯಕ್ಕೆ ತಯಾರಿ ಆರಂಭಿಸಿದೆ. ಸೌತಾಂಪ್ಟನ್‌ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯ ಭಾರತಕ್ಕೆ ಮಹತ್ವದ ಪಂದ್ಯವಾಗಿದೆ.

ಆಗಸ್ಟ್ 30 ರಿಂದ ಆರಂಭಗೊಳ್ಳಲಿರುವ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ. 69 ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೊಹ್ಲಿ 5594 ರನ್ ಸಿಡಿಸಿದ್ದಾರೆ. ಈ ಮೂಲಕ 6ಸಾವಿರ ರನ್ ಸಾಧನೆಗೆ ಕೇವಲ 6 ರನ್‌ಗಳ ಅವಶ್ಯಕತೆ ಇದೆ.

4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಕನಿಷ್ಠ 6  ರನ್ ಸಿಡಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 6ಸಾವಿರ ರನ್ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 23 ಸೆಂಚುರಿ ಸಿಡಿಸೋ ಮೂಲಕ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ದಾಖಲೆಯನ್ನ ಸರಿಗಟಿದ್ದಾರೆ. 
 

click me!