
ಲಂಡನ್(ಆ.14): ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆದ 2ನೇ ಟೆಸ್ಟ್‌ನಲ್ಲಿ ಭಾರತ ಸೋಲಲು, ತಂಡದ ಆಯ್ಕೆಯಲ್ಲಿ ಆದ ತಪ್ಪುಗಳು ಸಹ ಕಾರಣ ಎಂದು ನಾಯಕ ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ. ‘ಸೂಕ್ತ ಸಂಯೋಜನೆಯೊಂದಿಗೆ ಕಣಕ್ಕಿಳಿಯುವಲ್ಲಿ ಎಡವಿದೆವು.
ಮುಂದಿನ ಪಂದ್ಯದಲ್ಲಿ ತಪ್ಪು ತಿದ್ದಿಕೊಳ್ಳಲು ಅವಕಾಶವಿದೆ. ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದೇವೆ. ಆದರೆ 0-2 ರಿಂದ 1-2 ಕ್ಕೆ ಅಂತರವನ್ನು ತಗ್ಗಿಸಿಕೊಂಡರೆ ಸರಣಿ ಮತ್ತಷ್ಟು ರೋಚಕಗೊಳ್ಳಲಿದೆ’ ಎಂದು ಕೊಹ್ಲಿ ಹೇಳಿದ್ದಾರೆ.
ಬ್ಯಾಟ್ಸ್‌ಮನ್‌ಗಳಿಗೆ ಸಲಹೆ: ‘ನಮ್ಮ ಬ್ಯಾಟ್ಸ್‌ಮನ್ ಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನುವುದು ತಪ್ಪು. ಬ್ಯಾಟ್ಸ್‌ಮನ್ ಮಾನಸಿಕವಾಗಿ ಸದೃಢನಾಗಿದ್ದರೆ, ತನ್ನ ಯೋಜನೆಗಳ ಬಗ್ಗೆ ಅರಿವಿದ್ದರೆ ಈ ರೀತಿ ಸಮಸ್ಯೆ ಆಗುವುದಿಲ್ಲ’ ಎಂದು ಕೊಹ್ಲಿ ಹೇಳಿದ್ದಾರೆ. ‘ತಲೆಯಲ್ಲಿ ಹತ್ತಾರು ಗೊಂದಲಗಳನ್ನು ಇಟ್ಟುಕೊಂಡು ಬ್ಯಾಟ್ ಮಾಡಿದರೆ ಯಶಸ್ಸು ಕಾಣಲು ಸಾಧ್ಯವೇ ಇಲ್ಲ. ದಿಗ್ಗಜರು ಹೇಳುವ ರೀತಿ ಆಟವನ್ನು ಸರಳವಾಗಿಡಬೇಕು’ ಎಂದು ಕೊಹ್ಲಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.