ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಮನೆಯಲ್ಲಿ ದೀಪಾವಳಿ ಸಂಭ್ರಮ!

By Web DeskFirst Published Nov 7, 2018, 9:05 PM IST
Highlights

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮನೆಯಲ್ಲಿ ದೀಪಾವಳಿ ಸಂಭ್ರಮ. ಇದೇ ಸಂತಸದ ಸಮಯದಲ್ಲಿ ವಿರುಷ್ಕಾ ಜೋಡಿ ಎಲ್ಲರಿಗೂ ದೀಪಾವಳಿ ಶುಭಾಶಯ ಕೋರಿದ್ದಾರೆ. 

ಮುಂಬೈ(ನ.07): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಮನೆಯಲ್ಲಿ ದೀಪಾವಳಿ ಸಂಭ್ರಮ ಗರಿಗೆದರಿದೆ. ಸಂಪೂರ್ಣ ಮನೆಯನ್ನ ದೀಪಗಳಿಂದ ಅಲಂಕೃತಗೊಳಿಸಿ ವಿರುಷ್ಕಾ ಜೋಡಿ, ಎಲ್ಲರಿಗೂ ದೀಪಾವಳಿ ಶುಭಾಶಯ ಕೋರಿದ್ದಾರೆ.

 

A very happy and prosperous Diwali to everyone from our home. Wishing everyone peace, happiness and good health. God bless. 🙏😇❤ pic.twitter.com/fsQbXsNaSM

— Virat Kohli (@imVkohli)

 

ಟ್ವಿಟರ್ ಮೂಲಕ ಕೊಹ್ಲಿ ಹಾಗೂ ಅನುಷ್ಕಾ ಶುಭಾಶಯ ಕೋರಿದ್ದಾರೆ.  ನವೆಂಬರ್ 5 ರಂದು ಉತ್ತರಖಂಡದ ಹರಿದ್ವಾರದಲ್ಲಿ ಹುಟ್ಟುಹಬ್ಬ ಆಚರಿಸಿದ ವಿರಾಟ್ ಕೊಹ್ಲಿ ಇದೀಗ ತವರಿಗೆ ವಾಪಾಸ್ಸಾಗಿದ್ದಾರೆ. 

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ, ನವೆಂಬರ್ 21 ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧದ  ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ.
 

click me!