
ಜೊಹಾನ್ಸ್'ಬರ್ಗ್(ಫೆ.10): 4ನೇ ಏಕದಿನ ಪಂದ್ಯವನ್ನು ಭಾರತ ತನ್ನದಾಗಿಸಿಕೊಂಡರೆ, ಐಸಿಸಿ ಏಕದಿನ ರ್ಯಾಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಗಟ್ಟಿಯಾಗುತ್ತದೆ.
3ನೇ ಏಕದಿನಕ್ಕೂ ಮುನ್ನ ಶಿಖರ್ ಧವನ್, ತಂಡ ಪ್ರತಿ ಪಂದ್ಯವನ್ನೂ ಗೆಲ್ಲುವ ಗುರಿ ಹೊಂದಿರುವುದಾಗಿ ಹೇಳಿದ್ದರು. ಇಲ್ಲಿನ ವಾಂಡರರ್ಸ್ ಮೈದಾನದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಸಾಧಿಸಿದ ಗೆಲುವು, ತಂಡದ ಆತ್ಮವಿಶ್ವಾಸ ವೃದ್ಧಿಸಲು ಕಾರಣವಾಗಿದ್ದು ಅಲ್ಲಿಂದ ತಂಡ ಹಿಂದಿರುಗಿ ನೋಡಿಲ್ಲ.
ಧವನ್'ಗೆ 100 ಏಕದಿನದ ಸಂಭ್ರಮ
ಭಾರತ ತಂಡದ ಆರಂಭಿಕ ಬ್ಯಾಟ್ಸ್'ಮನ್ ಶಿಖರ್ ಧವನ್, ಆಫ್ರಿಕಾ ವಿರುದ್ಧ 4ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದರೆ ತಮ್ಮ ವೃತ್ತಿಬದುಕಿನಲ್ಲಿ 100 ಏಕದಿನ ಪಂದ್ಯಗಳನ್ನು ಪೂರೈಸಲಿದ್ದಾರೆ. ಭಾರತ ಪರ 100 ಏಕದಿನಗಳನ್ನಾಡಿದ 34ನೇ ಆಟಗಾರ ಎನ್ನುವ ಕೀರ್ತಿಗೆ ದೆಹಲಿ ಆಟಗಾರ ಪಾತ್ರರಾಗಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.