
ಲಂಡನ್(ಜು.11): ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಈ ನಡುವೆ ಸಿಕ್ಕಿರೋ ಅಲ್ವ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ.
ವಿಶ್ರಾಂತಿ ಸಮಯದಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಲಂಡನ್ ಸುತ್ತಾಟ ನಡೆಸಿದ್ದಾರೆ. ಇಷ್ಟೇ ಅಲ್ಲ, ಕೊಹ್ಲಿ ಡೇ ಔಟ್ ವಿಥ್ ಮೈ ಬ್ಯೂಟಿ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್‌ಲೋಡ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಕೆನ್ನೆಗೆ ಪತ್ನಿ ಅನುಷ್ಕಾ ಮುತ್ತಿಕ್ಕುತ್ತಿರುವ ಫೋಟೋ ಭಾರಿ ವೈರಲ್ ಆಗಿದೆ. ಇಬ್ಬರೂ ಶೇಡ್ಸ್ ಧರಿಸಿ ಫೋಟೋಗೆ ಫೋಸ್ ನೀಡಿದ್ದಾರೆ. ಟ್ವಿಟರ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಕೊಹ್ಲಿ ಈ ಪೋಟೋ ಪೋಸ್ಟ್ ಮಾಡಿದ್ದಾರೆ.
2017ರ ಡಿಸೆಂಬರ್‌ನಲ್ಲಿ ಕೊಹ್ಲಿ ಹಾಗೂ ಅನುಷ್ಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿಗೆ ಅನುಷ್ಕಾ ಸಾಥ್ ನೀಡಿದ್ದಾರೆ. ಜುಲೈ 7 ರಂದು ಟೀಂ ಇಂಡಿಯಾ ಮಾಜಿ ನಾಯಕ ಎಂ ಎಸ್ ಧೋನಿ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲೂ ಅನುಷ್ಕಾ ಹಾಗೂ ಕೊಹ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.