ಟೆಸ್ಟ್ ಸರಣಿಗೂ ಮುನ್ನ ಕೊಹ್ಲಿ ಬಾಯ್ಸ್ ರಿಲ್ಯಾಕ್ಸ್: ಸಲ್ಮಾನ್ ಖಾನ್ ಸ್ಟೈಲ್‌ನಲ್ಲಿ ಪೋಸ್!

Published : Aug 21, 2019, 06:29 PM IST
ಟೆಸ್ಟ್ ಸರಣಿಗೂ ಮುನ್ನ ಕೊಹ್ಲಿ ಬಾಯ್ಸ್ ರಿಲ್ಯಾಕ್ಸ್: ಸಲ್ಮಾನ್ ಖಾನ್ ಸ್ಟೈಲ್‌ನಲ್ಲಿ ಪೋಸ್!

ಸಾರಾಂಶ

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೂ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರು ಸಲ್ಮಾನ್ ಖಾನ್ ಸ್ಟೈಲ್‌ನಲ್ಲಿ ಪೋಟೋಗೆ ಪೋಸ್ ನೀಡಿದ್ದಾರೆ. ವಿಂಡೀಸ್ ನಾಡಿನಲ್ಲಿ ಕೊಹ್ಲಿ ಹುಡುಗರ ಮಸ್ತಿ ಕುರಿತ ವಿವರ ಇಲ್ಲಿದೆ.

ಪೊರ್ಟ್ ಆಫ್ ಸ್ಪೇನ್(ಆ.21): ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಗುರುವಾರದಿಂದ(ಆ.22)ರಿಂದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸ ನಡೆಸಿರುವ ಕೊಹ್ಲಿ ಬಾಯ್ಸ್ ಇದೀಗ ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ. ಕೆರಿಬಿಯನ್ ನಾಡಿನ ಸುಂದರ ಬೀಚ್‌ಗಳಲ್ಲಿ ಟೀಂ ಇಂಡಿಯಾ  ಕ್ರಿಕೆಟಿಗರು ಎಂಜಾಯ್ ಮಾಡಿದ್ದಾರೆ.

ಇದನ್ನೂ ಓದಿ: ಅಲುಗಾಡುತ್ತಿದೆ ರಿಕಿ ಪಾಂಟಿಂಗ್ ದಾಖಲೆ; ಹೊಸ ಇತಿಹಾಸಕ್ಕೆ ಸಜ್ಜಾದ ಕೊಹ್ಲಿ!

ಸತತ ಕ್ರಿಕೆಟ್‌ನಿಂದ ಬಳಲಿದ್ದ ಟೀಂ ಇಂಡಿಯಾ ರಿಲ್ಯಾಕ್ಸ್‌ಗಾಗಿ ಬೀಚ್‌ನಲ್ಲಿ ಒಂದಷ್ಟು ಕಾಲ ಮಸ್ತಿ ಮಾಡಿತು. ಈ ವೇಳೆ ಫೋಟೋಗೋ ಪೋಸ್ ಕೂಡ ನೀಡಿತ್ತು. ಬಾಲಿವುಡ್ ನಟ ಸಲ್ಮಾನ್ ಖಾನ್ ರೀತಿಯಲ್ಲಿ ಶರ್ಟ್ ಬಿಚ್ಚಿ ತಮ್ಮ ಸಿಕ್ಸ್ ಪ್ಯಾಕ್ ಜಿಮ್ನಾಸ್ಟಿಕ್ ಬಾಡಿ ಪ್ರದರ್ಶಿಸುತ್ತಾ ಫೋಟೋಗೆ ಪೋಸ್ ನೀಡಿದ್ದಾರೆ. ಇದೀಗ ಈ ಪೋಟೋ ಬಾರಿ ಸದ್ದು ಮಾಡುತ್ತಿದೆ.

ಇದನ್ನೂ ಓದಿ: ವಿಂಡೀಸ್‌ ಟೆಸ್ಟ್‌ಗೆ ಟೀಂ ಇಂಡಿಯಾದಲ್ಲಿ ಯಾರಿಗೆಲ್ಲಾ ಚಾನ್ಸ್..?

ನಾಯಕ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಕನ್ನಡಿಗರಾದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ವೇಗಿ ಇಶಾಂತ್ ಶರ್ಮಾ, ಉಪನಾಯಕ ಅಜಿಂಕ್ಯ ರಹಾನೆ, ವಿಕೆಟ್ ಕೀಪರ್ ರಿಷಬ್ ಪಂತ್, ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಸೇರಿದಂತೆ ಟೀಂ ಇಂಡಿಯಾ ಸಹಾಯಕ ಸಿಬ್ಬಂಧಿ ಕೂಡ ಶರ್ಟ್‌ಲೆಸ್ ಫೋಸ್ ನೀಡಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?