
ನವದೆಹಲಿ(ನ.03): ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದ್ವಿಶತಕ ಸಿಡಿಸಿದ್ದಾರೆ. ಟೆಸ್ಟ್ ಕ್ರಿಕೆಟ್'ನಲ್ಲಿ ವೈಯುಕ್ತಿಕ ಗರಿಷ್ಠ ರನ್ 243 ರನ್ ಬಾರಿಸಿದರು. ಅಧ್ಭುತ ಫಾರ್ಮ್'ನಲ್ಲಿರುವ ಕೊಹ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಇಂದು ಕ್ರಿಕೆಟ್ ದಂತಕತೆ ಸರ್. ಡಾನ್ ಬ್ರಾಡ್'ಮನ್ ದಾಖಲೆಯನ್ನು ಕೊಹ್ಲಿ ಪಡಿಗಟ್ಟಿದ್ದಾರೆ.
ಹೌದು, ಇದೀಗ ಅತೀ ಕಡಿಮೆ ಅವಧಿಯಲ್ಲಿ 6 ದ್ವಿಶತಕ ಸಿಡಿಸಿದ ಆಟಗಾರ ಎನ್ನುವ ಶ್ರೇಯ ಕೊಹ್ಲಿ ಪಾಲಾಗಿದೆ. ಕೊಹ್ಲಿ ಟೆಸ್ಟ್ ಕ್ರಿಕೆಟ್'ನಲ್ಲಿ ಕೇವಲ 499 ದಿನಗಳಲ್ಲಿ 6 ದ್ವಿಶತಕ ಸಿಡಿಸುವ ಮೂಲಕ ಇಲ್ಲಿಯವರೆಗೆ ಡಾನ್ ಬ್ರಾಡ್'ಮನ್(581 ದಿನಗಳು) ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿದ್ದಾರೆ.
ಇದಷ್ಟೇ ಅಲ್ಲದೇ 2016 ಮತ್ತು 2017ರ ಕ್ಯಾಲೆಂಡರ್ ವರ್ಷದಲ್ಲಿ ತಲಾ ಮೂರು-ಮೂರು ದ್ವಿಶತಕ ಸಿಡಿಸಿದ ಆಟಗಾರ ಎನ್ನುವ ದಾಖಲೆಯೂ ಕೊಹ್ಲಿ ಪಾಲಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.