IPL 2019: ವಿರಾಟ್ ಕೊಹ್ಲಿ ಭರ್ಜರಿ ಸೆಂಚುರಿ- KKRಗೆ 214 ರನ್ ಗುರಿ

Published : Apr 19, 2019, 09:42 PM IST
IPL 2019: ವಿರಾಟ್ ಕೊಹ್ಲಿ ಭರ್ಜರಿ ಸೆಂಚುರಿ- KKRಗೆ 214 ರನ್ ಗುರಿ

ಸಾರಾಂಶ

ಈಡನ್ ಗಾರ್ಡನ್ಸ್ ಮೈದಾನದಲ್ಲಿ RCB ಅಬ್ಬರಿಸಿದೆ. ಕೊಹ್ಲಿ ಹಾಗೂ ಮೊಯಿನ್ ಬ್ಯಾಟಿಂಗ್‌ಗೆ ಕೆಕೆಆರ್ ಹೈರಾಣಾಗಿದೆ. RCB 3 ವಿಕೆಟ್ ನಷ್ಟಕ್ಕೆ 213 ರನ್ ಸಿಡಿಸಿದೆ. RCB ತಂಡದ ಬ್ಯಾಟಿಂಗ್ ಹೈಲೈಟ್ಸ್ ಇಲ್ಲಿದೆ.  

ಕೋಲ್ಕತಾ(ಏ.19): ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಹಾಗೂ ಮೊಯಿನ್ ಆಲಿ ಸಿಡಿಸಿದ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು,KKR ವಿರುದ್ಧ ಅಬ್ಬರಿಸಿದೆ. ನಿಗಿದತ 20 ಓವರ್‌ಗಳಲ್ಲಿ RCB 3 ವಿಕೆಟ್ ನಷ್ಟಕ್ಕೆ 213 ರನ್ ಸಿಡಿಸಿದೆ. ಈ ಮೂಲಕ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ 214 ರನ್ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್ ಇಳಿದ RCB ಆರಂಭ ಉತ್ತಮವಾಗಿರಲಿಲ್ಲ. ಪಾರ್ಥೀವ್ ಪಟೇಲ್ 11 ರನ್ ಸಿಡಿಸಿ ಔಟಾದರು. ಇನ್ನು ಅಕ್ಷದೀಪ್ ನಾಥ್ 13 ರನ್‌ಗೆ ಸುಸ್ತಾದರು. ಆದರೆ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಯಿನ್ ಆಲಿ ಜೊತೆಯಾಟದಿಂದ  RCB ಚೇತರಿಸಿಕೊಂಡಿತು. ಕೊಹ್ಲಿ ಎಚ್ಚರಿಕೆಯಿಂದ ಬ್ಯಾಟ್ ಬೀಸಿದರೆ, ಮೊಯಿನ್ ಆಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಆಲಿ ಹಾಗೂ ಕೊಹ್ಲಿ ಅರ್ಧಶತಕ ಸಿಡಿಸಿದರು. ಮೊಯಿನ್ ಆಲಿ 28 ಎಸೆತದಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 66 ರನ್ ಸಿಡಿಸಿ ಔಟಾದರು.  ಆಲಿ ವಿಕೆಟ್ ಪತನದ ಬಳಿಕ ಆರ್ಭಟಿಸಿದ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದರು. ಈ ಮೂಲಕ ಐಪಿಎಲ್ ಕ್ರಿಕೆಟ್‌ನಲ್ಲಿ 5ನೇ ಶತಕ ದಾಖಲಿಸಿದರು. ಶತಕ ಸಿಡಿಸಿದ ಬೆನ್ನಲ್ಲೇ ಕೊಹ್ಲಿ ವಿಕೆಟ್ ಪತನಗೊಂಡಿತು. ಕೊಹ್ಲಿ 100 ರನ್ ಸಿಡಿಸಿದರೆ, ಮಾರ್ಕಸ್ ಸ್ಟೊಯ್ನಿಸ್ ಅಜೇಯ 11 ರನ್ ಭಾರಿಸಿದರು. ಈ ಮೂಲಕ RCB 3 ವಿಕೆಟ್ ನಷ್ಟಕ್ಕೆ 213 ರನ್ ಸಿಡಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!
ಕೋಲ್ಕತಾ ಸ್ಟೇಡಿಯಂನಿಂದ ಲಿಯೋನೆಲ್ ಮೆಸ್ಸಿ ಬೇಗ ನಿರ್ಗಮನ; ಮಿತಿಮೀರಿದ ಅಭಿಮಾನಿಗಳ ದಾಂಧಲೆ!