
ನವದೆಹಲಿ[ಮೇ.23]: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 2019ನೇ ಸಾಲಿನ ಅತ್ಯಂತ ವಿಶ್ವಾಸಾರ್ಹ ಕ್ರೀಡಾ ವ್ಯಕ್ತಿತ್ವ ಹೊಂದಿದ ಆಟಗಾರರಾಗಿ ಹೊರ ಹೊಮ್ಮಿದ್ದಾರೆ.
ಕೊಹ್ಲಿ ಜತೆ ಸಚಿನ್ ತೆಂಡುಲ್ಕರ್ ಹಾಗೂ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಈ ಪಟ್ಟಿಯಲ್ಲಿ ಎಂ. ಎಸ್.ಧೋನಿ ಹೆಸರಿಲ್ಲದಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಗ್ರಾಹಕರ ಒಳನೋಟಗಳ ಕಂಪನಿ (ಕನ್ಯೂಮರ್ಸ್ ಇನ್‌ಸೈಟ್) ಟಿಆರ್‌ಎ ನಡೆಸಿದ ಅಧ್ಯಯನದಲ್ಲಿ ಹಲವು ಕಂಪನಿಗಳ ರಾಯಭಾರಿ ಆಗಿರುವ ಹಾಗೂ ಈ ಒಪ್ಪಂದಗಳಿಂದ ಅತ್ಯಧಿಕ ಸಂಭಾವನೆ ಪಡೆಯುತ್ತಿರುವ ವಿರಾಟ್ ಕೊಹ್ಲಿ, ಅತ್ಯಂತ ವಿಶ್ವಾಸಾರ್ಹ ಕ್ರೀಡಾ ವ್ಯಕ್ತಿತ್ವ ಹೊಂದಿರುವ ಆಟಗಾರನಾಗಿ ಹೊರಹೊಮ್ಮಿದ್ದಾರೆ.
ಭಾರತೀಯ ಸೇನೆಗಾಗಿ ವಿಶ್ವಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ವಿರಾಟ್ ಕೊಹ್ಲಿ
ಕ್ರೀಡೆ, ಉದ್ಯಮ ಸೇರಿದಂತೆ ಇತರೆ ಕ್ಷೇತ್ರಗಳಿಂದ 39 ಮಂದಿಯನ್ನು 2019ನೇ ಸಾಲಿನ ಅತ್ಯಂತ ವಿಶ್ವಾಸಾರ್ಹ ವ್ಯಕ್ತಿತ್ವ ಹೊಂದಿದವರನ್ನು ಆಯ್ಕೆ ಮಾಡಲಾಗಿದೆ. 16 ನಗರಗಳ 2315 ಗ್ರಾಹಕರ ಅಭಿಪ್ರಾಯದ ಮೇಲೆ ಈ ಅಧ್ಯಯನ ನಡೆಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.