
ದುಬೈ(ಡಿ.07): ಲಂಕಾ ಸರಣಿಯಲ್ಲಿ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಬಿಡುಗಡೆ ಮಾಡಿದ ನೂತನ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಲಂಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಟ್ಟು 610 ರನ್ ಕಲೆಹಾಕಿದ್ದ ಕೊಹ್ಲಿ ಇದೀಗ ಡೇವಿಡ್ ವಾರ್ನರ್ ಹಾಗೂ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ. ನಂ.1 ಸ್ಥಾನದಲ್ಲಿ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಭದ್ರವಾಗಿದ್ದಾರೆ.
ಈಗಾಗಲೇ ಟಿ20 ಹಾಗೂ ಏಕದಿನ ಕ್ರಿಕೆಟ್'ನಲ್ಲಿ ನಂ.1 ಸ್ಥಾನದಲ್ಲಿರುವ ಕೊಹ್ಲಿ, ಮುಂದಿನ ವರ್ಷ ಮೂರೂ ಮಾದರಿಯ ಕ್ರಿಕೆಟ್'ನಲ್ಲಿ ನಂ.1 ಸ್ಥಾನಕ್ಕೇರುವ ಅವಕಾಶವಿದೆ. 2005-06ರಲ್ಲಿ ರಿಕಿ ಪಾಂಟಿಂಗ್ ಮೂರು ಮಾದರಿಯಲ್ಲಿ ಐಸಿಸಿ ಸಂ.1 ಸ್ಥಾನಕ್ಕೇರಿದ ಏಕೈಕ ಬ್ಯಾಟ್ಸ್'ಮನ್ ಎನಿಸಿಕೊಂಡಿದ್ದಾರೆ.
ಟಾಪ್ 10 ಬ್ಯಾಟ್ಸ್'ಮನ್'ಗಳ ಪಟ್ಟಿಯಲ್ಲಿ ಟೆಸ್ಟ್ ಪರಿಣಿತ ಚೇತೇಶ್ವರ ಪೂಜಾರ ಎರಡು ಸ್ಥಾನ ಕುಸಿತ ಕಂಡಿದ್ದು 4ನೇ ಸ್ಥಾನದಲ್ಲಿದ್ದಾರೆ.
ಇನ್ನು ಬೌಲರ್'ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ 3ನೇ ಸ್ಥಾನಕ್ಕೆ ಕುಸಿದಿದ್ದರೆ, ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಆಲ್ರೌಂಡರ್ ಪಟ್ಟಿಯಲ್ಲಿ ಜಡೇಜಾ 2ನೇ ಸ್ಥಾನದಲ್ಲೇ ಭದ್ರವಾಗಿದ್ದರೆ, ಒಂದು ಸ್ಥಾನ ಕುಸಿದಿರುವ ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.