
ಲಂಡನ್(ಏ.12): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್, ವಿಸ್ಡನ್ ವರ್ಷದ ಕ್ರಿಕೆಟಿಗ ಗೌರವಕ್ಕೆ ಪಾತ್ರರಾಗಿದ್ದಾರೆ. ಕೊಹ್ಲಿ ಕಳೆದ ವರ್ಷವೂ ಸಹ ವಿಸ್ಡನ್ ಪ್ರಶಸ್ತಿಗೆ ಭಾಜನರಾಗಿದ್ದರು.
ವಿರಾಟ್ ಕೊಹ್ಲಿ ಬ್ಯಾಟಿಂಗ್ ಪ್ರದರ್ಶನ ಅದ್ಭುತವಾಗಿದ್ದು, 5 ಟೆಸ್ಟ್ ಶತಕಗಳ ಪೈಕಿ ಮೂರು ಶತಕಗಳನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ್ದಾರೆ. ಇನ್ನೆರಡು ಶತಕ ಬಾರಿಸಿ ಅಜೇಯರಾಗುಳಿದಿದ್ದರು. ಇನ್ನು ಏಕದಿನ ಕ್ರಿಕೆಟ್'ನಲ್ಲಿ 1,460 ರನ್ ಸಿಡಿಸಿದ್ದರಲ್ಲಿ ಆಶ್ಚರ್ಯಪಡುವಂತಹದ್ದು ಏನು ಇಲ್ಲ ಎಂದು ವಿಸ್ಡನ್ ಸಂಪಾದಕ ಲಾರೆನ್ಸ್ ಬೂತ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಕಾರಣ ವಿರಾಟ್ ಕೊಹ್ಲಿಗೆ ಹಾಗೂ ಕಳೆದ ವರ್ಷ ನಡೆದಿದ್ದ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಫೈನಲ್'ವರೆಗೂ ಯಶಸ್ವಿಯಾಗಿ ಮುನ್ನಡೆಸಿದ್ದ ಕಾರಣ ಮಿಥಾಲಿ ರಾಜ್'ರನ್ನು ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕೊಹ್ಲಿ, ಮಿಥಾಲಿ ಸೇರಿದಂತೆ ಐವರು ಕ್ರಿಕೆಟಿಗರು ಈ ಬಾರಿ ಪ್ರಶಸ್ತಿಗೆ ಭಾಜನರಾಗಿದ್ದು, ಮೂವರು ಆಟಗಾರ್ತಿಯರಿಗೆ ನೀಡಿರುವುದು ವಿಶೇಷ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.