ಧೋನಿ ಸಾರ್ವಕಾಲಿಕ ದಾಖಲೆ ಮುರಿಯಲು ಸಜ್ಜಾದ ’ಕಿಂಗ್ ಕೊಹ್ಲಿ’..!

Published : Aug 30, 2019, 02:44 PM IST
ಧೋನಿ ಸಾರ್ವಕಾಲಿಕ ದಾಖಲೆ ಮುರಿಯಲು ಸಜ್ಜಾದ ’ಕಿಂಗ್ ಕೊಹ್ಲಿ’..!

ಸಾರಾಂಶ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ದಾಖಲೆ ಅಳಿಸಿಹಾಕಲು ರೆಡಿಯಾಗಿದ್ದಾರೆ. ಇದು ಸಾಧ್ಯವಾಗಬೇಕಿದ್ದರೆ, ಇಂದಿನಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಜಯಿಸಬೇಕು. ಹೀಗಾದರೆ, ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ದಾಖಲೆ ಇನ್ಮುಂದೆ ಕೊಹ್ಲಿ ಪಾಲಾಗಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ... 

ಜಮೈಕಾ[ಆ.30]: ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಮುರಿಯಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ.

ಒಂದು ಗೆಲುವು: 3 ಅಪರೂಪದ ರೆಕಾರ್ಡ್, ಕಿಂಗ್ ಕೊಹ್ಲಿ ಕಿರೀಟಕ್ಕೆ ಮತ್ತಷ್ಟು ಗರಿ..!

ಹೌದು, ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕರಾಗಿ ಎಂ.ಎಸ್. ಧೋನಿ ಅತಿ ಹೆಚ್ಚು ಗೆಲುವುಗಳ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ ಕೇವಲ ಒಂದು ಜಯದ ಅವಶ್ಯಕತೆಯಿದೆ. ಈ ಮೂಲಕ ಕೊಹ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಪಟ್ಟವನ್ನು ಅಲಂಕರಿಸಲಿದ್ದಾರೆ. 

ಸೇನಾ ಸೇವೆ ಬಳಿಕ ಹೊಸ ಅವತಾರದಲ್ಲಿ ಧೋನಿ!

ಧೋನಿ ನಾಯಕತ್ವದಲ್ಲಿ ಭಾರತ 27 ಟೆಸ್ಟ್ ಪಂದ್ಯಗಳನ್ನು ಜಯಿಸಿತ್ತು. 47 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ 27 ಟೆಸ್ಟ್ ಜಯ ಸಾಧಿಸಿ ಜಂಟಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಧೋನಿ 60 ಪಂದ್ಯಗಳಲ್ಲಿ 27ರಲ್ಲಿ ಜಯಿಸಿದ್ದರು. ವಿಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕೊಹ್ಲಿ, ವಿದೇಶಿ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ಜಯ ಪಡೆದ ನಾಯಕ ಎನಿಸಿಕೊಂಡಿದ್ದಾರೆ. ಮಾಜಿ ನಾಯಕ ಸೌರವ್ ಗಂಗೂಲಿ (11 ಟೆಸ್ಟ್ ಜಯ) ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಕೊಹ್ಲಿ ವಿದೇಶಿ ನೆಲದಲ್ಲಿ 26 ಪಂದ್ಯಗಳ ಪೈಕಿ 12ರಲ್ಲಿ ಜಯ ಸಾಧಿಸಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?