ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಗೆಲುವಿನ ಬೆನ್ನಲ್ಲೇ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಬಿಸಿಸಿಐ ದಿಢೀರ್ ನಿರ್ಧಾರದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಪಿಯರ್(ಜ.23): ನ್ಯೂಜಿಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಶುಭಾರಂಭ ಮಾಡಿದ ಟೀಂ ಇಂಡಿಯಾ ಇದೀಗ 2ನೇ ಪಂದ್ಯದತ್ತ ಚಿತ್ತ ಹರಿಸಿದೆ. ಇದರ ಬೆನ್ನಲ್ಲೇ ಬಿಸಿಸಿಐ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದೆ. ನ್ಯೂಜಿಲೆಂಡ್ ವಿರುದ್ಧದ ಅಂತಿಮ 2 ಏಕದಿನ ಹಾಗೂ 3 ಪಂದ್ಯಗಳ ಟಿ20 ಸರಣಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಿದೆ.
ಇದನ್ನೂ ಓದಿ:
ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನುಳಿದ 4 ಪಂದ್ಯಗಳಲ್ಲಿ 2 ಪಂದ್ಯಕ್ಕೆ ಮಾತ್ರ ಕೊಹ್ಲಿ ಲಭ್ಯರಿದ್ದಾರೆ. ಬಳಿಕ ತವರಿಗೆ ಮರಳಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸತತ ಪಂದ್ಯದಿಂದ ಕೊಹ್ಲಿ ಬಳಲಿದ್ದಾರೆ. ಇಷ್ಟೇ ಅಲ್ಲ, 2019ರ ವಿಶ್ವಕಪ್ ದೃಷ್ಟಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಿದೆ.
ಇದನ್ನೂ ಓದಿ: ಆಸಿಸ್ ವಿರುದ್ಧದ ಗೆಲುವು- ಆಯ್ಕೆ ಸಮಿತಿಗೆ ಬಿಸಿಸಿಐ ಭರ್ಜರಿ ಗಿಫ್ಟ್!
ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಕೊಹ್ಲಿ ಬದಲಿ ಆಟಗಾರನಾಗಿ ಬಿಸಿಸಿಐ ಯಾರನ್ನೂ ಆಯ್ಕೆ ಮಾಡಿಲ್ಲ. ನ್ಯೂಜಿಲೆಂಡ್ ವಿರುದ್ದದ ಸರಣಿ ಬಳಿಕ ತವರಿನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಬಳಿಕ ಐಪಿಎಲ್ ಟೂರ್ನಿ ಆರಂಭವಾಗಲಿದೆ.