
ಪುಣೆ(ಅ.25): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ 2016ನೇ ಸಾಲಿನ ಐಸಿಸಿ ಏಕದಿನ ವರ್ಷದ ತಂಡದ ಕ್ಯಾಪ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶೇಷವಾಗಿ ತಯಾರಿಸಲಾಗಿರುವ ಈ ಕ್ಯಾಪ್'ನಲ್ಲಿ ICC ODI TEAM OF THE YEAR 2016 ಎಂದು ಬರೆಯಲಾಗಿದೆ.
ಇನ್ನು ರವೀಂದ್ರ ಜಡೇಜಾ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯದಿದ್ದರೂ, 2016ನೇ ಸಾಲಿನ ತೋರಿದ ಅದ್ಭುತ ಆಲ್ರೌಂಡ್ ಪ್ರದರ್ಶನ ಪರಿಗಣಿಸಿ ಐಸಿಸಿ ಏಕದಿನ ವರ್ಷದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಸಂತೋಷವನ್ನು ಸಾಮಾಜಿಕ ಜಾಲತಾಣ ಇನ್'ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಐಸಿಸಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಕ್ಕೆ ಹೆಮ್ಮೆ ಆಗುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.