
ವಿರಾಟ್ ಕೊಹ್ಲಿ ಗುರಿ ಬೆನ್ನತ್ತುವಲ್ಲಿ ಮತ್ತೆ ಸಾಮ್ರಾಟ ಎಂದು ಸಾಬೀತು ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ನೀಡಿದ್ದ ಗುರಿಯನ್ನು ಅನಾಯಾಸವಾಗಿ ತಲುಪಿದ ಟೀಂ ಇಂಡಿಯಾ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿದೆ.
ದಕ್ಷಿಣ ಆಫ್ರಿಕಾ ನೀಡಿದ್ದ 270 ರನ್ ಗುರಿಯನ್ನು 27 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ಗಳ ಜಯ ಸಾಧಿಸಿದೆ. ನಾಯಕ ವಿರಾಟ್ ಕೊಹ್ಲಿ 112 ರನ್ ಬಾರಿಸಿದರೆ, ಅಜಿಂಕ್ಯ ರಹಾನೆ 79 ರನ್ ಬಾರಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸವಾಲಿನ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 67 ರನ್ ಗಳಿಸುವಷ್ಟರಲ್ಲೇ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈವೇಳೆ ಮೂರನೇ ವಿಕೆಟ್ ಗೆ ಜತೆಯಾದ ನಾಯಕ ಕೊಹ್ಲಿ ಹಾಗೂ ರಹಾನೆ ಜೋಡಿ 189 ರನ್'ಗಳ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ಸನೀಹಕ್ಕೆ ತಂದರು. ವೃತ್ತಿಜೀವನದಲ್ಲಿ ಅದ್ಭುತ ಫಾರ್ಮ್'ನಲ್ಲಿರುವ ಕೊಹ್ಲಿ 33ನೇ ಏಕದಿನ ಶತಕ ಸಿಡಿಸಿದರು. ಅಂತಿಮವಾಗಿ ಟೀಂ ಇಂಡಿಯಾ 6 ವಿಕೆಟ್'ಗಳ ಜಯ ದಾಖಲಿಸಿತು.
ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾ ಫಾಪ್ ಡುಪ್ಲೆಸಿಸ್ ಶತಕದ ನೆರವಿನಿಂದ 279 ರನ್ ಬಾರಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.