
ಜಮೈಕಾ(ಆ.31): ವೆಸ್ಟ್ ಇಂಡೀಸ್ ವಿರುದ್ದದ 2ನೇ ಪಂದ್ಯದ ಮೊದಲ ದಿನ ಭಾರತ ಅಬ್ಬರಿಸಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಅರ್ಧಶತಕ ನೆರವಿನಿಂದ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 264 ರನ್ ಸಿಡಿಸಿತು. ದಿನದಾಟದ ಬಳಿಕ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ನೆರೆದಿದ್ದ ಜಮೈಕಾ ಅಭಿಮಾನಿಗಳಿಗೆ ಸ್ಪೆಷಲ್ ಉಡುಗೊರೆ ನೀಡಿದರು.
ಇದನ್ನೂ ಓದಿ: ಮಯಾಂಕ್ -ಕೊಹ್ಲಿ ಫಿಫ್ಟಿ: ಬೃಹತ್ ಮೊತ್ತದತ್ತ ಭಾರತ
ದಿನದಾಟದ ಬಳಿಕ ವಿರಾಟ್ ಕೊಹ್ಲಿ ನೇರವಾಗಿ ಕ್ರೀಡಾಂಗಣದ ಗ್ಯಾಲರಿ ಬಳಿ ತೆರಳಿದರು. ಜಮೈಕಾ ಕ್ರಿಕೆಟ್ ಅಭಿಮಾನಿಗಳಿಗೆ ಆಟೋಗ್ರಾಫ್ ಹಾಗೂ ಸೆಲ್ಫಿ ನೀಡಿದರು. ಕೊಹ್ಲಿಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ತಾಳ್ಮೆಯಿಂದ ಆಟೋಗ್ರಾಫ್ ಸಹಿ ಮಾಡಿದರು.
ಇದನ್ನೂ ಓದಿ: ಪ್ರಧಾನಿ ಮೋದಿ ಕನಸು; ಮೊಟೆರಾ ಕ್ರೀಡಾಂಗಣಕ್ಕೆ ಹೊಸ ರೂಪ!
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಇದೀಗ 2ನೇ ಟೆಸ್ಟ್ ಪಂದ್ಯ ಆಡುತ್ತಿದೆ. ಈ ಪಂದ್ಯದಲ್ಲೂ ಗೆಲುವು ಸಾಧಿಸಿ, ಸರಣಿ ವೈಟ್ ವಾಶ್ ಮಾಡಲು ಕೊಹ್ಲಿ ಸೈನ್ಯ ತಯಾರಿ ನಡೆಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.