
ದೆಹಲಿ(ಸೆ.20): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತ ಕಂಡ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ಇದೀಗ ಸೌತ್ ಆಫ್ರಿಕಾ ವಿರುದ್ದವೂ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ನಾಯಕ ವಿರಾಟ್ ಕೊಹ್ಲಿಯ ಈ ಯಶಸ್ಸಿಗೆ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಶಾಸಕ ಗೌತಮ್ ಗಂಭೀರ್ ಹೇಳಿದ್ದಾರೆ.
ಇದನ್ನೂ ಓದಿ: ಕಾಶ್ಮೀರದೊಳಗೆ ಕಡ್ಡಿ ಆಡಿಸಿದ ಆಫ್ರಿದಿಗೆ ಗಂಭೀರ್ ತಿರುಗೇಟು!
ವಿರಾಟ್ ಕೊಹ್ಲಿ ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್. ಕೊಹ್ಲಿ ಯಶಸ್ವಿ ನಾಯಕನಾಗಿದ್ದು ಎಂ.ಎಸ್.ಧೋನಿ ಹಾಗೂ ರೋಹಿತ್ ಶರ್ಮಾ ನೆರವಿನಿಂದ. ಧೋನಿ ಹಾಗೂ ರೋಹಿತ್ ಉಪಸ್ಥಿತಿಯಿಂದ ಟೀಂ ಇಂಡಿಯಾ ನಿಗದಿತ ಓವರ್ ಕ್ರಿಕೆಟ್‌ನಲ್ಲಿ ಗೆಲುವು ಸಾಧಿಸುತ್ತಿದೆ ಎಂದು ಗಂಭೀರ್ ಹೇಳಿದ್ದಾರೆ.
ಇದನ್ನೂ ಓದಿ: ಸೈನಿ ಗಾಡ್ ಫಾದರ್ ಗಂಭೀರ್ ಆಕ್ರೋಶಗೊಂಡಿದ್ದೇಕೆ..?
ಧೋನಿ ಹಾಗೂ ರೋಹಿತ್ ಸೇವೆ ಇಲ್ಲದ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ತಮ್ಮ ರಾಯಲ್ ಚಾಲೆಂಜರ್ಸ್ ತಂಡವನ್ನು ಚಾಂಪಿಯನ್ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಕೊಹ್ಲಿ ನಾಯಕತ್ವದ ಯಶಸ್ಸಿನಲ್ಲಿ ಧೋನಿ ಹಾಗೂ ರೋಹಿತ್ ಪಾತ್ರವೇ ಪ್ರಮುಖ ಎಂದು ಗಂಭೀರ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.