
ದೆಹಲಿ(ಜೂ.18): ಇಂಜುರಿಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ಯೋ-ಯೋ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿರುವ ಟೀಮ್ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಜಿಮ್ ಕಸರತ್ತು ಆರಂಭಿಸಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕಾಗಿ ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ಕೊಹ್ಲಿ, ಅದ್ಬುತ ಪ್ರದರ್ಶನ ನೀಡೋ ವಿಶ್ವಾಸದಲ್ಲಿದ್ದಾರೆ.
ವಿರಾಟ್ ಕೊಹ್ಲಿ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿರುವ ವಿಡೀಯೋವನ್ನ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಿಮ್ ಸೆಶನ್‌ನಲ್ಲಿ ಕೊಹ್ಲಿ ಏನೆಲ್ಲ ಮಾಡಿದರು ಅನ್ನೋದನ್ನೂ ಕೂಡ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಸರಣಿಗೆ ಕೊಹ್ಲಿ ರೆಡಿಯಾಗುತ್ತಿದ್ದಾರೆ.
ಜೂನ್ ತಿಂಗಳಲ್ಲಿ ಇಂಗ್ಲೆಂಡ್‌ನ ಸರ್ರೆ ಕೌಂಟಿ ಕ್ರಿಕೆಟ್ ಆಡಲು ಒಪ್ಪಂದ ಮಾಡಿಕೊಂಡಿದ್ದ ಕೊಹ್ಲಿ ಕತ್ತು ನೋವಿನಿಂದ ವಿಶ್ರಾಂತಿ ಪಡೆದಿದ್ದರು. ಇದೀಗ ಇಂಜುರಿಯಿಂದ ಚೇತರಿಸಿಕೊಂಡಿರುವ ಕೊಹ್ಲಿ ಜಿಮ್ ಅಭ್ಯಾಸ ಆರಂಭಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.