ಧೋನಿ ನಿವೃತ್ತಿ ಸುಳಿವು ನೀಡಿದ್ರಾ ಕೊಹ್ಲಿ?

Published : Sep 12, 2019, 03:16 PM ISTUpdated : Sep 13, 2019, 03:24 PM IST
ಧೋನಿ ನಿವೃತ್ತಿ ಸುಳಿವು ನೀಡಿದ್ರಾ ಕೊಹ್ಲಿ?

ಸಾರಾಂಶ

ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ನಿವೃತ್ತಿಯಾಗಲಿದ್ದಾರೆ ಅನ್ನೋ ಮಾತು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಆದರೆ ಈ ಊಹಾಪೋಹಗಳನ್ನು ಧೋನಿ ತಳ್ಳಿಹಾಕುತ್ತಲೇ ಬಂದಿದ್ದಾರೆ. ಇದೀಗ ನಾಯಕ ವಿರಾಟ್ ಕೊಹ್ಲಿ ಮಾಡಿರುವ ಟ್ವೀಟ್, ಧೋನಿ ನಿವೃತ್ತಿಯನ್ನು ಹೇಳುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

"

ಧರ್ಮಶಾಲ(ಸೆ.12): ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ ತವರಿನಲ್ಲಿ ಅಬ್ಬರಿಸಲು ರೆಡಿಯಾಗಿದೆ. ಆದರೆ ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ಇದೀಗ ಸೌತ್ ಆಫ್ರಿಕಾ ಸರಣಿಯಿಂದಲೂ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ವಿಶ್ರಾಂತಿ ಪಡೆದಿದ್ದಾರೆ. ಈ ಮೂಲಕ ಧೋನಿ ನಿವೃತ್ತಿ ಮಾತಿಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದರು. ಇದೀಗ ನಾಯಕ ವಿರಾಟ್ ಕೊಹ್ಲಿ ಟ್ವೀಟ್, ಧೋನಿ ನಿವೃತ್ತಿ ಸುಳಿವು ನೀಡುತ್ತಿದೆ.

ಇದನ್ನೂ ಓದಿ: ಧೋನಿ ಭವಿಷ್ಯದ ಬಗ್ಗೆ ಶೀಘ್ರವೇ ನಿರ್ಧಾರಕ್ಕೆ ಬನ್ನಿ: ಕುಂಬ್ಳೆ

2019ರ ವಿಶ್ವಕಪ್ ಟೂರ್ನಿ ಬಳಿಕ ಧೋನಿ ನಿವೃತ್ತಿ ಹೇಳಲಿದ್ದಾರೆ ಅನ್ನೋ ಮಾತು ಬಲವಾಗಿ ಕೇಳಿಬರುತ್ತಿತ್ತು. ಆದರೆ ಧೋನಿ ಮೌನ ಮತ್ತೆ ಹಲವು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ವಿಂಡೀಸ್ ಪ್ರವಾಸದ ಬದಲು ಸೈನಿಕನಾಗಿ ದೇಶ ಸೇವೆ ಮಾಡಿದ ಧೋನಿ ಸೌತ್ ಆಫ್ರಿಕಾ  ಸರಣಿಯಿಂದಲೂ ಹಿಂದೆ ಸರಿದಿದ್ದರು. ಹೀಗಾಗಿ ಧೋನಿ ನಿವೃತ್ತಿ ಯಾವಾಗ ಅನ್ನೋ ಸುದ್ದಿಗೆ ಬ್ರೇಕ್ ಬಿದ್ದಿತ್ತು. ಇದೀಗ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮಾಡೋ ಮತ್ತ ಧೋನಿ ನಿವೃತ್ತಿಯಾಗಲಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ.

ಇದನ್ನೂ ಓದಿ: MS ಧೋನಿ ಭವಿಷ್ಯ ಇನ್ನೂ ಸಸ್ಪೆನ್ಸ್‌!

ಈ ಪಂದ್ಯ ನಾನು ಯಾವತ್ತು ಮರೆಯಲಾರೆ, ವಿಶೇಷ ರಾತ್ರಿ. ಈ ದಿಗ್ಗಜನಿಂದ ನಾನು ಫಿಟ್ನೆಸ್ ಟೆಸ್ಟ್‌ಗೆ ಓಡಿದ ಹಾಗೇ ಓಡಬೇಕಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ. 

 

ವಿರಾಟ್ ಕೊಹ್ಲಿ ಟ್ವೀಟ್‌ಗೆ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಧೋನಿ, ರಹಸ್ಯವಾಗಿ ಕೊಹ್ಲಿ ಬಳಿ ವಿದಾಯದ ಕುರಿತು ಹೇಳಿದ್ದಾರೆ. ಹೀಗಾಗಿ ಕೊಹ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ ಎಂದು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ