ಐಸಿಸಿ ನೂತನ ಟೆಸ್ಟ್ ಶ್ರೇಯಾಂಕ ಪ್ರಕಟ..!

By Web DeskFirst Published Aug 5, 2018, 2:16 PM IST
Highlights

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ವಿರಾಟ್ ಕೊಹ್ಲಿ ಒಟ್ಟು 200 ರನ್ ಬಾರಿಸುವ ಮೂಲಕ 31 ಅಂಕಗಳನ್ನು ಕಲೆಹಾಕಿದ್ದರು. ಇದೀಗ ಟೆಸ್ಟ್ ಕ್ರಿಕೆಟ್’ನಲ್ಲಿ ಒಟ್ಟು 934 ಅಂಕಗಳನ್ನು ಕಲೆಹಾಕುವ ಮೂಲಕ ಭಾರತದ ಮೊದಲ ಹಾಗೂ ವಿಶ್ವದ 14ನೇ ಬ್ಯಾಟ್ಸ್’ಮನ್ ಎನ್ನುವ ಕೀರ್ತಿಗೂ ಕೊಹ್ಲಿ ಪಾತ್ರರಾಗಿದ್ದಾರೆ.

ದುಬೈ[ಆ.05]: ಐಸಿಸಿ ನೂತನ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್’ನಲ್ಲಿ ನಂ.1 ಸ್ಥಾನಕ್ಕೇರಿದ ಭಾರತದ ಏಳನೇ ಬ್ಯಾಟ್ಸ್’ಮನ್ ಎನ್ನುವ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ. 

ಇದನ್ನು ಓದಿ: ಐಸಿಸಿ ಆಟಗಾರರ ನೂತನ ಏಕದಿನ ರ‍್ಯಾಂಕಿಂಗ್ ಪ್ರಕಟ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ವಿರಾಟ್ ಕೊಹ್ಲಿ ಒಟ್ಟು 200 ರನ್ ಬಾರಿಸುವ ಮೂಲಕ 31 ಅಂಕಗಳನ್ನು ಕಲೆಹಾಕಿದ್ದರು. ಇದೀಗ ಟೆಸ್ಟ್ ಕ್ರಿಕೆಟ್’ನಲ್ಲಿ ಒಟ್ಟು 934 ಅಂಕಗಳನ್ನು ಕಲೆಹಾಕುವ ಮೂಲಕ ಭಾರತದ ಮೊದಲ ಹಾಗೂ ವಿಶ್ವದ 14ನೇ ಬ್ಯಾಟ್ಸ್’ಮನ್ ಎನ್ನುವ ಕೀರ್ತಿಗೂ ಕೊಹ್ಲಿ ಪಾತ್ರರಾಗಿದ್ದಾರೆ. ಅತಿಹೆಚ್ಚು ಅಂಕ ಕಲೆಹಾಕಿದವರ ಪಟ್ಟಿಯಲ್ಲಿ ಕ್ರಿಕೆಟ್ ದಂತಕತೆ ಡಾನ್ ಬ್ರಾಡ್’ಮನ್[961], ಸ್ಟೀವ್  ಸ್ಮಿತ್[947] ಮೊದಲೆರಡು ಸ್ಥಾನದಲ್ಲಿದ್ದಾರೆ. ಕಳೆದ 32 ತಿಂಗಳುಗಳಿಂದ ನಂ.1 ಸ್ಥಾನದಲ್ಲಿ ವಿರಾಜಮಾನರಾಗಿದ್ದ ಸ್ಟೀವ್ ಸ್ಮಿತ್ ಇದೀಗ ನಂ.2 ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನು ಓದಿ: ಇಂಡೋ-ಆಂಗ್ಲೋ ಟೆಸ್ಟ್ ಸರಣಿಗೂ ಮುನ್ನ ರ‍್ಯಾಂಕಿಂಗ್ ಪ್ರಕಟ

ಈ ಮೊದಲು ಟೆಸ್ಟ್ ಕ್ರಿಕೆಟ್’ನಲ್ಲಿ ಭಾರತದ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಗೌತಮ್ ಗಂಭೀರ್, ಸುನಿಲ್ ಗವಾಸ್ಕರ್, ವಿರೇಂದ್ರ ಸೆಹ್ವಾಗ್ ಹಾಗೂ ದಿಲೀಪ್ ವೆಂಗ್’ಸರ್ಕಾರ್ ಟೆಸ್ಟ್ ರ‍್ಯಾಂಕಿಂಗ್’ನಲ್ಲಿ ನಂ.1 ಸ್ಥಾನಕ್ಕೇರಿದ ಸಾಧನೆ ಮಾಡಿದ್ದರು.
 

click me!