ಸೆಹ್ವಾಗ್ ಕೋಚ್ ಅರ್ಜಿ ತಿರಸ್ಕರಿಸಿದ ಬಿಸಿಸಿಐ..?

Published : Jun 06, 2017, 06:47 PM ISTUpdated : Apr 11, 2018, 01:06 PM IST
ಸೆಹ್ವಾಗ್ ಕೋಚ್ ಅರ್ಜಿ ತಿರಸ್ಕರಿಸಿದ ಬಿಸಿಸಿಐ..?

ಸಾರಾಂಶ

ಸೆಹ್ವಾಗ್ ಬರೆದ ಅರ್ಜಿಯಲ್ಲಿ, 'ನಾನು ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಮುಖ್ಯ ಕೋಚ್ ಆಗಿದ್ದೇನೆ. ಹಾಲಿ ತಂಡದಲ್ಲಿರುವ ಎಲ್ಲಾ ಆಟಗಾರರ ಜತೆ ಆಟವಾಡಿದ್ದೇನೆಂದು' ಸೆಹ್ವಾಗ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು(ಜೂ.06): ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದ ವಿರೇಂದ್ರ ಸೆಹ್ವಾಗ್ ಸಲ್ಲಿಸಿದ್ದ ಅರ್ಜಿಯನ್ನು ಬಿಸಿಸಿಐ ತಳ್ಳಿಹಾಕಿದೆ ಎಂದು ವರದಿಯಾಗಿದೆ.

ಹೌದು, ಬಿಸಿಸಿಐ ಮೂಲಗಳಿಂದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿ ಎಂದು ಮಾಜಿ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್ ಅವರಿಗೆ ಆಹ್ವಾನ ಬಂದ ಬಳಿಕ, ಡೆಲ್ಲಿ ಬ್ಯಾಟ್ಸ್'ಮನ್ ಕೇವಲ ಎರಡು ಸಾಲುಗಳಲ್ಲಿ ಟೀಂ ಇಂಡಿಯಾ ಮುಖ್ಯಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

ಸೆಹ್ವಾಗ್ ಬರೆದ ಅರ್ಜಿಯಲ್ಲಿ, 'ನಾನು ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಮುಖ್ಯ ಕೋಚ್ ಆಗಿದ್ದೇನೆ. ಹಾಲಿ ತಂಡದಲ್ಲಿರುವ ಎಲ್ಲಾ ಆಟಗಾರರ ಜತೆ ಆಟವಾಡಿದ್ದೇನೆಂದು' ಸೆಹ್ವಾಗ್ ಅರ್ಜಿ ಸಲ್ಲಿಸಿದ್ದರು.

ಆದರೆ ಅರ್ಜಿಯ ಜತೆಗೆ ಸ್ವವಿವರ ಪತ್ರ ('ರೆಸ್ಯೂಮ್') ಕೂಡ ಕಳಿಸಿಕೊಟ್ಟಿಲ್ಲ. ಅದನ್ನು ಅರ್ಜಿಯ ಜತೆಗೆ ಕಳಿಸಿಕೊಡುವಂತೆ ತಿಳಿಸಲಾಗಿದೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಚಾಂಪಿಯನ್ಸ್ ಟ್ರೋಫಿಯಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳುತ್ತಿರುವ ಸೆಹ್ವಾಗ್, ಬಿಸಿಸಿಐ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಎದುರು ಸ್ಕೈಪ್ ಮೂಲಕ ಸಂದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಆದರೆ ಹೊಸ ವಿಷ್ಯಾ ಎನಪ್ಪಾ ಅಂದ್ರೆ, ಆಸ್ಟ್ರೇಲಿಯಾ ತಂಡದ ಬೌಲಿಂಗ್ ಕೋಚ್ ಕ್ರೇಗ್ ಡರ್'ಮ್ಯಾಟ್ ನಿಗದಿತ ದಿನಾಂಕದ ಬಳಿಕ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರಿಂದ ಅವರ ಅರ್ಜಿಯನ್ನು ಪರಿಗಣಿಸಲಾಗಿಲ್ಲ. ಅದೇ ರೀತಿ ರೆಸ್ಯೂಮ್ ಕಳಿಸದ ಸೆಹ್ವಾಗ್ ಅರ್ಜಿಯನ್ನು ಬಿಸಿಸಿಐ ತಿರಸ್ಕರಿಸಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು ಚಾಂಪಿಯನ್ಸ್ ಟ್ರೋಫಿ ಬಳಿಕವಷ್ಟೇ ಈ ಎಲ್ಲಾ ಅನುಮಾನಗಳಿಗೆ ತೆರೆಬೀಳಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ಜಾಕ್‌ಪಾಟ್‌; 8 ಕೋಟಿಗಾಗಿ ಹನಿಮೂನ್ ತ್ಯಾಗಕ್ಕೆ ರೆಡಿಯಾದ ಈ ಸ್ಟಾರ್ ಕ್ರಿಕೆಟರ್!
ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಆಯ್ಕೆ ಮಾಡಿದ ಆಕಾಶ್ ಚೋಪ್ರಾ; ಗಿಲ್‌ಗಿಲ್ಲ ಉಪನಾಯಕ ಪಟ್ಟ!