
ಬೆಂಗಳೂರು(ಡಿ.19): ಫೋಕ್ಸ್‌ವ್ಯಾಗನ್ ಶೀಘ್ರದಲ್ಲೇ ಎಲೆಕ್ಟ್ರಿಕಲ್ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ ಮಾಡಲಿದೆ. ವಿಶೇಷ ಅಂದರೆ ಈ ಕಾರು ಒಂದು ಬಾರಿ ಚಾರ್ಜ್ ಮಾಡಿದರೆ ಬರೋಬ್ಬರಿ 550 ಕೀ.ಮಿ ಪ್ರಯಾಣ ಮಾಡಬಹುದು ಎಂದು ಕಂಪೆನಿ ಹೇಳಿದೆ. ಈ ಮೂಲಕ ಇತರ ಎಲ್ಲಾ ಎಲೆಕ್ಟ್ರಿಕ್ ಕಾರುಗಳಿಗೆ ಭಾರಿ ಪೈಪೋಟಿ ನೀಡಲಿದೆ.
ಇದನ್ನೂ ಓದಿ: ಭಾರತದಲ್ಲಿ ಮತ್ತೆ ಬಿಡುಗಡೆಯಾಗುತ್ತಿದೆ ಲ್ಯಾಂಬಿ ಸ್ಕೂಟರ್!
ಸದ್ಯ ರೋಡ್ ಟೆಸ್ಟ್ ನಡೆಸುತ್ತಿರುವ ಫೋಕ್ಸ್‌ವ್ಯಾಗನ್ ಎಲೆಕ್ಟ್ರಿಕ್ ಕಾರು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ. ಆದರೆ ಇದರ ಬೆಲೆ 20 ಲಕ್ಷ ರೂಪಾಯಿ. ಈ ಮೂಲಕ ಇದು ಟೆಲ್ಸಾ ಮಾಡೆಲ್ 3 ಹಾಗೂ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ರಸ್ತೆಗಿಳಿಯಲಿದೆ.
ಇದನ್ನೂ ಓದಿ:2018ರಲ್ಲಿ ಬಿಡುಗಡೆಯಾದ ಗರಿಷ್ಠ ಮೈಲೇಜ್ ಬೈಕ್!
ಇದು ಫೋಕ್ಸ್‌ವ್ಯಾಗನ್ ಸಂಸ್ಥೆಯ ಮೊದಲ ಎಲೆಕ್ಟ್ರಿಕ್ ಕಾರು. ಇದರ ಬೆನ್ನಲ್ಲೇ, ಸೆಡಾನ್ ಹಾಗೂ MPV ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲು ಫೋಕ್ಸ್‌ವ್ಯಾಗನ್ ಮುಂದಾಗಿದೆ. ಈಗಾಗಲೇ ಎಮಿಶನ್ ನಿಯಮ ಉಲ್ಲಂಘನೆಯಿಂದ ತೀವ್ರ ಹಿನ್ನಡೆ ಅನುಭವಿಸಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಗೆ ಎಲೆಕ್ಟ್ರಿಕ್ ಕಾರು ಹೊಸ ಚೈತನ್ಯ ನೀಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.