
ಕರಾಚಿ(ಡಿ.24): ಮುಂಬರುವ ದಿನಗಳಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್'ನ ಎಲ್ಲಾ ದಾಖಲೆಗಳನ್ನು ಮುರಿಯಬಹುದು ಎಂದು ಪಾಕಿಸ್ತಾನದ ಮಾಜಿ ನಾಯಕ ವಕಾರ್ ಯೂನಿಸ್ ಹೇಳಿದ್ದಾರೆ.
ಇದೇ ರೀತಿ ಫಿಟ್'ನೆಸ್ ಕಾಯ್ದುಕೊಂಡರೆ ಹಾಗೆಯೇ ಬ್ಯಾಟಿಂಗ್ ಕೌಶಲಗಳತ್ತ ವಿರಾಟ್ ಇನ್ನಷ್ಟು ಗಮನ ಹರಿಸಿದರೆ, ಮುಂಬರುವ ವರ್ಷಗಳಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್'ನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಬಹುದು ಎಂದು ಪಾಕ್ ಮಾಜಿ ವೇಗಿ ವಕಾರ್ ಅಭಿಪ್ರಾಯಪಟ್ಟಿದ್ದಾರೆ.
ಇದೇವೇಳೆ ಸಮಕಾಲಿನ ಕ್ರಿಕೆಟ್'ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರತಿಭೆ ಎಂದು ಕಳೆದ ವರ್ಷವಷ್ಟೇ ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದ ವಕಾರ್ ಡೆಲ್ಲಿ ಕ್ರಿಕೆಟಿಗನನ್ನು ಕೊಂಡಾಡಿದ್ದಾರೆ. ಸಮಕಾಲಿನ ಕ್ರಿಕೆಟಿಗರಲ್ಲಿ ವಿರಾಟ್ ಅದ್ಭುತ ಪ್ರದರ್ಶನ ತೋರುತ್ತಿದ್ದು, ಮುಂದೆಯೂ ಇದೇ ರೀತಿ ಪ್ರದರ್ಶನ ತೋರಿದರೆ ಬ್ಯಾಟಿಂಗ್'ನಲ್ಲಿ ಸಾಕಷ್ಟು ಸಾಧನೆ ಮಾಡಲಿದ್ದಾರೆ ಎಂದು ಪಾಕ್ ಆಟಗಾರ ಭವಿಷ್ಯ ನುಡಿದಿದ್ದಾರೆ.
ಸಚಿನ್ ತೆಂಡೂಲ್ಕರ್ ಹಾಗೂ ಬ್ರಿಯನ್ ಲಾರಾ ಇಬ್ಬರಲ್ಲಿ ಯಾರು ಶ್ರೇಷ್ಠ ಆಟಗಾರ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಕಾರ್, ಇಬ್ಬರು ಶ್ರೇಷ್ಠ ಆಟಗಾರರೇ. ಅದರಲ್ಲೂ ಕ್ರಿಕೆಟ್ ಬದ್ಧತೆಯ ವಿಚಾರದಲ್ಲಿ ಸಚಿನ್ ಶ್ರೇಷ್ಠ ಕ್ರಿಕೆಟಿಗ ಎಂದು ವಕಾರ್ ಅಭಿಪ್ರಾಯಪಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.