ಟೀಂ ಇಂಡಿಯಾದ 3ನೇ ವಿಕೆಟ್ ಪತನ- ತಂಡಕ್ಕೆ ನಾಯಕ ಕೊಹ್ಲಿ ಆಸರೆ

Published : Jul 25, 2018, 05:25 PM IST
ಟೀಂ ಇಂಡಿಯಾದ 3ನೇ ವಿಕೆಟ್ ಪತನ- ತಂಡಕ್ಕೆ ನಾಯಕ ಕೊಹ್ಲಿ ಆಸರೆ

ಸಾರಾಂಶ

ಎಸೆಕ್ಸ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆಂಗ್ಲರ ವಿರುದ್ದ ಕಣಕ್ಕಿಳಿದಿರುವ ಟೀಂ ಇಂಡಿಯಾ ಬ್ಯಾಟಿಂಗ್ ಪ್ರದರ್ಶನ ಹೇಗಿದೆ? ತಂಡದ ಮೊತ್ತವೆಷ್ಟು? ಈ ಕುರಿತ ವಿವರ ಇಲ್ಲಿದೆ.

ಚೆಲ್ಮ್ಸ್‌ಫೋರ್ಡ್(ಜು.25): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಎಸೆಕ್ಸ್ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಭಾರತ 3 ವಿಕೆಟ್ ಕಳೆದುಕೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಆರಂಭದಲ್ಲೇ ಶಿಖರ್ ಧವನ್ ಹಾಗೂ ಚೇತೇಶ್ವರ್ ಪೂಜಾರ ವಿಕೆಟ್ ಕಳೆದುಕೊಂಡಿತು. ಧವನ್ ಡಕೌಟ್ ಆದರೆ, ಪೂಜಾರ 1 ರನ್ ಸಿಡಿಸಿ ನಿರ್ಗಮಿಸಿದರು. ಆದರೆ ಮುರಳಿ ವಿಜಯ್ ಹಾಗೂ ಅಜಿಂಕ್ಯ ರಹಾನೆ ಚೇತರಿಕೆ ನೀಡೋ ಪ್ರಯತ್ನ ಮಾಡಿದರು.

 

 

ಅಜಿಂಕ್ಯ ರಹಾನೆ 17ರನ್ ಸಿಡಿಸಿ ಔಟಾದರು. ಇದೀಗ ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಆಸರೆಯಾಗಿದ್ದಾರೆ. ಆರಂಭಿಕ ವಿಜಯ್ ಹಾಗೂ ಕೊಹ್ಲಿ ಜೊತೆಯಾಟದಿಂದ ಟೀಂ ಇಂಡಿಯಾ ದಿಟ್ಟ ಹೋರಾಟ ನೀಡಿದೆ. ಸದ್ಯ ಭಾರತ 60 ರನ್ ಗಡಿ ದಾಟಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತಕ್ಕೆ ಬರದಿದ್ದರೇ ಟಿ20 ವಿಶ್ವಕಪ್‌ನಿಂದ ಔಟ್, ಈ ತಂಡಕ್ಕೆ ಚಾನ್ಸ್! ಬಾಂಗ್ಲಾದೇಶಕ್ಕೆ ಐಸಿಸಿ ಖಡಕ್ ಎಚ್ಚರಿಕೆ
WPL 2026: ಸತತ 5 ಪಂದ್ಯಗಳನ್ನು ಗೆದ್ದ RCB ಐಕಾನಿಕ್ ಪೋಸ್ ಕೊಟ್ಟ ನಾಯಕಿ ಮಂಧನಾ!