
ಕಾನ್ಪುರ(ಮೇ.14): ಸನ್‌ರೈಸರ್ಸ್ ತಂಡದ ನಾಯಕ ಡೇವಿಡ್ ವಾರ್ನರ್, ಸತತ 2 ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್ ಕಲೆಹಾಕಿದ 2ನೇ ಬ್ಯಾಟ್ಸ್‌ಮನ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2016ರಲ್ಲಿ ಒಟ್ಟು 848 ರನ್ ಗಳಿಸಿದ್ದ ಅವರು, ಶನಿವಾರದ ಪಂದ್ಯದಲ್ಲಿ ಆಮೋಘ ಆಟವಾಡಿ ಈ ಆವೃತ್ತಿಯಲ್ಲೂ 600 ರನ್ ಪೂರೈಸಿದರು. ಸದ್ಯ ಅವರು 14 ಪಂದ್ಯಗಳಿಂದ 604 ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್ 2011, 2012 ಹಾಗೂ 2013 ಸತತ ಮೂರು ಆವೃತ್ತಿಗಳಲ್ಲಿ ಕ್ರಿಸ್ ಗೇಲ್ ಈ ಸಾಧನೆ ಮಾಡಿದ್ದರು. ವಿರಾಟ್ ಕೊಹ್ಲಿ 2013 ಹಾಗೂ 2016ರ ಆವೃತ್ತಿಯಲ್ಲಿ 600ಕ್ಕೂ ಹೆಚ್ಚು ರನ್ ಕಲೆಹಾಕಿದ್ದರು. ಜತೆಗೆ ವಾರ್ನರ್ ಐಪಿಎಲ್‌ನಲ್ಲಿ ನಾಯಕನಾಗಿ 2000 ರನ್ ಪೂರೈಸಿದ ಸಾಧನೆಯನ್ನೂ ಮಾಡಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.