ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ, ಆದರೆ...?

Published : Feb 05, 2019, 02:03 PM ISTUpdated : Feb 05, 2019, 03:11 PM IST
ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ, ಆದರೆ...?

ಸಾರಾಂಶ

ಕಳೆದೊಂದು ವರ್ಷದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಜಯಿಸಿದ ಸಾಧನೆ ಮಾಡಿದೆ.

ಮುಂಬೈ[ಫೆ.05]: ಮುಂಬರುವ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸಮತೋಲನದಿಂದ ಕೂಡಿರುವ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಅದೇ ರೀತಿ ಕ್ರಿಕೆಟ್ ಮಹಾಸಂಗ್ರಾಮಕ್ಕೆ ಆತಿಥ್ಯ ವಹಿಸಿರುವ ಇಂಗ್ಲೆಂಡ್ ಕೂಡಾ ಕಠಿಣ ಪ್ರತಿಸ್ಫರ್ಧಿಯಾಗಿದೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹೇಳಿದ್ದಾರೆ.

ವಿಶ್ವಕಪ್: ಸಚಿನ್ ತೆಂಡುಲ್ಕರ್ 4 ದಾಖಲೆ ಯಾವುತ್ತೂ ಪುಡಿಯಾಗಲ್ಲ!

ಕಳೆದೊಂದು ವರ್ಷದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಜಯಿಸಿದ ಸಾಧನೆ ಮಾಡಿದೆ. ಟೀಂ ಇಂಡಿಯಾದ ಇತ್ತೀಚಿನ ಪ್ರದರ್ಶನವನ್ನು ಗಮನಿಸಿದರೆ, ಇದೇ ವರ್ಷ ಇಂಗ್ಲೆಂಡ್ ಮತ್ತು ವೇಲ್ಸ್’ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡವೆನಿಸಿದೆ ಎಂದು ತೆಂಡುಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಅತ್ಯುತ್ತಮ ಸಮತೋಲನದಿಂದ ಕೂಡಿರುವ ಟೀಂ ಇಂಡಿಯಾ ಜಗತ್ತಿನ ಯಾವುದೇ ಮೈದಾನದಲ್ಲಿ ಬೇಕಾದರೂ ಗೆಲ್ಲುವ ಸಾಮರ್ಥ್ಯವಿದೆ ಎಂದು ದಾಖಲೆಗಳೇ ಹೇಳುತ್ತವೆ. ಟೀಂ ಇಂಡಿಯಾದ ಈ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಭಾರತ ಪ್ರಶಸ್ತಿ ಗೆಲ್ಲುವ ಫೇವರೇಟ್ ತಂಡವೆಂದು ಹೇಳಲು ನನಗ್ಯಾವ ಅಂಜಿಕೆಯೂ ಇಲ್ಲ ಎಂದು ಮುಂಬೈಕರ್ ಹೇಳಿದ್ದಾರೆ.

ಇನ್ನು ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಟೀಂ ಇಂಡಿಯಾಗೆ ಕಠಿಣ ಪ್ರತಿಸ್ಫರ್ಧಿಗಳಾಗಬಹುದು ಎಂದು ತೆಂಡುಲ್ಕರ್ ಹೇಳಿದ್ದಾರೆ. ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್ ತವರಿನಲ್ಲಿ ಉತ್ತಮ ಪೈಪೋಟಿ ನೀಡಲಿದೆ. ಅದರಂತೆ ನ್ಯೂಜಿಲೆಂಡ್ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ತೋರಿದರೆ ಭಾರಕ್ಕೆ ಸವಾಲಾಗಬಹುದು ಎಂದಿದ್ದಾರೆ. ಬಾಲ್ ಟ್ಯಾಂಪರಿಂಗ್ ಮಾಡಿ ನಿಷೇಧದ ಶಿಕ್ಷೆ ಎದುರಿಸುತ್ತಿರುವ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ತಂಡ ಕೂಡಿಕೊಂಡರೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಸಚಿನ್ ತೆಂಡುಲ್ಕರ್ ಹೇಳಿದ್ದಾರೆ.

ವಿಶ್ವಕಪ್’ಗೆ ಬಹುತೇಕ ಒಂದು ಡಜನ್ ಟೀಂ ಇಂಡಿಯಾ ಆಟಗಾರರು ಫಿಕ್ಸ್..!

1983ರಲ್ಲಿ ಕಪಿಲ್ ದೇವ್ ನಾಯಕತ್ವದ ಟೀಂ ಇಂಡಿಯಾ ಮೊದಲ ಬಾರಿಗೆ ವಿಶ್ವಕಪ್ ಜಯಿಸಿತ್ತು. ಆ ಬಳಿಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ತಂಡ 2011ರ ಏಕದಿನ ವಿಶ್ವಕಪ್ ಗೆಲ್ಲುವುದರೊಂದಿಗೆ 28 ವರ್ಷಗಳ ಪ್ರಶಸ್ತಿ ಬರ ನೀಗಿಸಿಕೊಂಡಿತ್ತು. ಸಚಿನ್ ತೆಂಡುಲ್ಕರ್ 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು.   

ಏಕದಿನ ವಿಶ್ವಕಪ್‌: ಭಾರತಕ್ಕೆ ಕಿವೀಸ್‌, ಬಾಂಗ್ಲಾ ವಿರುದ್ಧ ಅಭ್ಯಾಸ

2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!
ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!