
ಕೋಲ್ಕತಾ(ಮಾ.15): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಟಿ20 ಸರಣಿಯಿಂದ ಹಿಂದೆ ಸರಿದಿದ್ದರೂ ಮಾಧ್ಯಮಗಳಲ್ಲಿ ಸುದ್ದಿಯಲ್ಲಿದ್ದಾರೆ. ಈ ಬಾರಿ ಕ್ರಿಕೆಟ್'ನಿಂದಾಗಿ ಅಲ್ಲ ಬದಲಾಗಿ ಪಶ್ಚಿಮ ಬಂಗಾಳದ SSLC ಪರೀಕ್ಷೆಯಲ್ಲಿ ಕೊಹ್ಲಿ ಕಾಣಿಸಿಕೊಂಡಿದ್ದಾರೆ.
ಅರೇ ಇದೇನು ಸುದ್ದಿ ಅಂತಿರಾ..? ಹೌದು ಕೊಹ್ಲಿ ದೈಹಿಕವಾಗಿ ಪರೀಕ್ಷೆಯಲ್ಲಿ ಪಾಲ್ಗೊಂಡಿಲ್ಲ. ಬದಲಾಗಿ ಇಂಗ್ಲೀಷ್ ಪ್ರಶ್ನೆಪತ್ರಿಕೆಯಲ್ಲಿ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಬಗ್ಗೆ 10 ಅಂಕದ ಕಡ್ಡಾಯ ಪ್ರಶ್ನೆಗೆ ಉತ್ತರಿಸುವಂತೆ ಪ್ರಶ್ನೆ ಕೇಳಲಾಗಿದೆ.
ವಿರಾಟ್ ಕೊಹ್ಲಿ ಬಗ್ಗೆ ಕಿರುಪರಿಚಯ ಬರೆಯಿರಿ ಎಂದು ಪ್ರಶ್ನೆ ಕೇಳಲಾಗಿದೆ. ಕೊಹ್ಲಿ ಬದುಕು ಯುವಕರಿಗೆ ಸ್ಪೂರ್ತಿದಾಯಕವಾಗಿದೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಲಕ್ಷ್ಮಿ ರತನ್ ಶುಕ್ಲಾ ಅಭಿಪ್ರಾಯಪಟ್ಟಿದ್ದಾರೆ. ಕೊಹ್ಲಿಯ ಬದುಕು, ಕ್ರಿಕೆಟ್ ಬಗೆಗಿನ ಸಮರ್ಪಣಾಭಾವ, ಶಿಸ್ತು ವಿದ್ಯಾರ್ಥಿಗಳ ಪಾಲಿಗೆ ಉತ್ತಮ ಮಾದರಿಯಾಗಲಿದೆ ಎಂದು ಹೇಳಿದ್ದಾರೆ.
ವಿರಾಟ್ ಬದುಕು ಯುವಕರ ಪಾಲಿಗೆ ನಿಜಕ್ಕೂ ಸ್ಫೂರ್ತಿದಾಯಕವೇ ಸರಿ. 29 ವರ್ಷದ ಕೊಹ್ಲಿ ದಿನದಿಂದ ದಿನಕ್ಕೆ ಪ್ರಬುದ್ಧ ಆಟಗಾರನಾಗಿ ಗುರುತಿಸಿಕೊಳ್ಳುತ್ತಿರುವುದು ಮಾತ್ರವಲ್ಲದೇ ದಾಖಲೆ ಮೇಲೆ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಜೊತೆಗೆ 2008 ಅಂಡರ್ ವಿಶ್ವಕಪ್ ಟೂರ್ನಿಯಲ್ಲಿ ನಾಯಕತ್ವ ವಹಿಸಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.