
ಕೊಲಂಬೊ(ಸೆ.05): 2019ರ ಏಕದಿನ ವಿಶ್ವಕಪ್'ಗೆ 20-25 ಆಟಗಾರರ ತಂಡವನ್ನು ಸಿದ್ಧಪಡಿಸುವುದು ನಮ್ಮ ಗುರಿ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
‘ಪಾರದರ್ಶಕವಾಗಿ ಆಟಗಾರರ ಆಯ್ಕೆ ಮಾಡಲಾಗುವುದು ಹಾಗೂ ಆಟಗಾರರಿಗೆ ನೀವು ವಿಶ್ವಕಪ್ ಸಂಭಾವ್ಯ ತಂಡದಲ್ಲಿ ಇರಲಿದ್ದೀರಿ ಎಂದು ತಿಳಿಸಲಾಗುತ್ತದೆ. ಪ್ರತಿಯೊಬ್ಬರಿಗೆ ಸಮನಾದ ಅವಕಾಶಗಳನ್ನು ವಿವಿಧ ಹಂತಗಳಲ್ಲಿ ನೀಡಲಾಗುತ್ತದೆ’ ಎಂದು ಕೊಹ್ಲಿ ಹೇಳಿದ್ದಾರೆ.
ತಂಡದಲ್ಲಿ ಸ್ಥಾನಕ್ಕಾಗಿ ಸ್ಪಿನ್ನರ್'ಗಳ ನಡುವೆ ಪೈಪೋಟಿ ಏರ್ಪಡಲಿದೆ ಎನ್ನುವ ಸುಳಿವನ್ನು ಕೊಹ್ಲಿ ನೀಡಿದ್ದಾರೆ. ‘ಬೌಲರ್‌ಗಳಿಗೆ ಅದರಲ್ಲೂ ಪ್ರಮುಖವಾಗಿ ಸ್ಪಿನ್ನರ್'ಗಳ ನಡುವೆ ಹೆಚ್ಚು ಪೈಪೋಟಿ ಏರ್ಪಡಲಿದೆ. ಯಾವುದೇ ಕಾರಣಕ್ಕೂ ಎದುರಾಳಿಗಳಿಗೆ ನಮ್ಮ ಯೋಜನೆ ಏನು ಎನ್ನುವುದು ತಿಳಿಯಲು ನಾವು ಬಿಡುವುದಿಲ್ಲ’ ಎಂದು ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲಂಕಾ ವಿರುದ್ಧದ ಸರಣಿಯಲ್ಲಿ ಅನುಭವಿ ಸ್ಪಿನ್ನರ್'ಗಳಾದ ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ಗಮನಾರ್ಹ ಪ್ರದರ್ಶನ ಪ್ರದರ್ಶನ ತೋರುವಲ್ಲಿ ಸಫಲವಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.