
ಕೊಚ್ಚಿ(ಆ.09): ಕೇರಳ ಹೈ ಕೋರ್ಟ್ ವೇಗಿ ಶ್ರೀಶಾಂತ್ ಮೇಲೆ ಹೇರಲಾಗಿದ್ದ ಅಜೀವ ನಿಷೇಧ ತೆರವುಗೊಳಿಸಿದ ಬೆನ್ನಲ್ಲೇ ಶ್ರೀಶಾಂತ್ 2019ರ ಏಕದಿನ ವಿಶ್ವಕಪ್ ಆಡುವ ಇರಾದೆ ವ್ಯಕ್ತಪಡಿಸಿದ್ದರು. ಶ್ರೀಶಾಂತ್'ಗೆ ಕ್ರಿಕೆಟ್ ಆಡಲು ಅವಕಾಶ ನೀಡಬೇಕೋ ಅಥವಾ ಬೇಡವೋ ಎನ್ನುವ ವಿಷಯ ಬಿಸಿಸಿಐ ತೀರ್ಮಾನಿಸಬೇಕು. ಬಿಸಿಸಿಐ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ ಹೇಳಿದೆ.
ಶ್ರೀಶಾಂತ್ ಕ್ರಿಕೆಟ್ ಆಡುವ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಕ್ರಿಕೆಟ್ ಸಂಸ್ಥೆ ಬಿಸಿಸಿಐ ಪತ್ರ ಕೂಡ ಬರೆದಿದೆ. ಕೇರಳ ಹೈಕೋರ್ಟ್ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ರದ್ದುಗೊಳಿಸಿತ್ತು. ಆದರೆ ಬಿಸಿಸಿಐ ಮಾತ್ರ ಈ ಸಂಬಂದ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರ ಬೆನ್ನಲ್ಲೇ ಮತ್ತೆ ಕ್ರಿಕೆಟ್'ನಲ್ಲಿ ಸಕ್ರಿಯರಾಗಬೇಕು ಎನ್ನುವ ಆಶಯ ಹೊಂದಿರುವುದಾಗಿ ಶ್ರೀಶಾಂತ್ ಹೇಳಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಶ್ರೀಶಾಂತ್ ವಿಚಾರದಲ್ಲಿ ಹೇಗೆ ನಡೆದುಕೊಳ್ಳಬೇಕು ಎನ್ನುವುದರ ಕುರಿತು ಮಾರ್ಗದರ್ಶನ ನೀಡುವಂತೆ ಕೇರಳ ಕ್ರಿಕೆಟ್ ಸಂಸ್ಥೆ ಬಿಸಿಸಿಐ ಅನ್ನು ಕೋರಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.