
ವೆಲ್ಲಿಂಗ್ಟನ್(ಡಿ.18): ಕೆರಿಬಿಯನ್ ಸ್ಫೋಟಕ ಬ್ಯಾಟ್ಸ್'ಮನ್ ಕ್ರಿಸ್ ಗೇಲ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡ ಕೂಡಿಕೊಂಡಿದ್ದಾರೆ.
ಕಿವೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ಅಂತರದಲ್ಲಿ ಹೀನಾಯ ಸೋಲು ಕಂಡ ಮುಖಭಂಗ ಅನುಭವಿಸಿರುವ ವೆಸ್ಟ್'ಇಂಡಿಸ್ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ನಿರೀಕ್ಷೆಯಲ್ಲಿದೆ. ಅದರಲ್ಲೂ ಕ್ರಿಸ್ ಗೇಲ್ ಆಗಮನ ತಂಡಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್'ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಗೇಲ್ ಗಮನ ಸೆಳೆದಿದ್ದರು. ವೆಸ್ಟ್'ಇಂಡಿಸ್ ಪ್ರಸ್ತುತ 9ನೇ ಶ್ರೇಯಾಂಕದಲ್ಲಿದ್ದು, ನ್ಯೂಜಿಲೆಂಡ್ 5ನೇ ಶ್ರೇಯಾಂಕದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.