ಸುರೇಶ್ ರೈನಾ ದಾಖಲೆ ಮುರಿದ ಸ್ಮೃತಿ ಮಂಧನಾ

By Web Desk  |  First Published Mar 4, 2019, 5:30 PM IST

ಟಿ20 ಕ್ರಿಕೆಟ್‌ನಲ್ಲಿ ಭಾರತದ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನಾ ಹೊಸ ದಾಖಲೆ ಬರೆದಿದ್ದಾರೆ. ಚುಟುಕು ಕ್ರಿಕೆಟ್‌ನಲ್ಲಿ ಸುರೇಶ್ ರೈನಾ ದಾಖಲೆ ಅಳಿಸಿ ಹಾಕೋ ಮೂಲಕ ಹೊಸ ಸಾಧನೆ ಮಾಡಿದ್ದಾರೆ. ಇಲ್ಲಿದೆ ವಿವರ.


ಗುವಾಹಟಿ(ಮಾ.04): ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಸ್ಮೃತಿ ಮಂಧನಾ ದಾಖಲೆ ಬರೆದಿದ್ದಾರೆ. ಟಿ20 ಮಾದರಿಯಲ್ಲಿ ತಂಡವನ್ನ ಮುನ್ನಡೆಸಿದ ಭಾರತ ಅತ್ಯಂತ ಕಿರಿಯ  ನಾಯಕಿ ಅನ್ನೋ ಹೆಗ್ಗಳಿಕೆಗೆ ಇದೀಗ ಸ್ಮೃತಿ ಮಂಧನಾ ಪಾತ್ರರಾಗಿದ್ದಾರೆ.

ಇದನ್ನೂ ಓದಿ: 16 ಭಾಷೆಗಳಲ್ಲಿ ತಮ್ಮ ಹೆಸರು ಟ್ಯಾಟು ಹಾಕಿಸಿಕೊಂಡು ಟ್ರೋಲ್ ಆದ ಪಾಂಡ್ಯ..!

Tap to resize

Latest Videos

ಮಂಧನಾಗಿಂತ ಮೊದಲು ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ರೈನಾ 23 ವರ್ಷ 197ನೇ ದಿನ ಟೀಂ ಇಂಡಿಯಾ ಟಿ20 ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಈ ಮೂಲಕ ಭಾರತ ಟಿ20 ತಂಡದ ನಾಯಕತ್ವ ವಹಿಸಿದ ಕಿರಿಯ ಕ್ರಿಕೆಟಿಗ ಅನ್ನೋ ದಾಖಲೆ ಬರೆದಿದ್ದರು. 

ಇದನ್ನೂ ಓದಿ: ಬಿಜೆಪಿ ಸೇರಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ಪತ್ನಿ..!

ಗುವಾಹಟಿಯಲ್ಲಿ ನಡೆದ ಮೊದಲ ಟಿ20ಯಲ್ಲಿ ಮಂಧಾನ ನಾಯಕತ್ವ ವಹಿಸಿಕೊಳ್ಳೋ ಮೂಲಕ 22 ವರ್ಷ 229ನೇ ದಿನ ನಾಯಕತ್ವ ವಹಿಸಿದ್ದಾರೆ. ಈ ಮೂಲಕ ರೈನಾ ದಾಖಲೆ ಮುರಿದಿದ್ದಾರೆ. ಆದರೆ ಈ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡದ ಕಳಪೆ ಪ್ರದರ್ಶನದಿಂದ ಸೋಲು ಕಂಡಿತು.

ಇದನ್ನೂ ಓದಿ: ವಿಶ್ವಕಪ್ 2019: ಟೀಂ ಇಂಡಿಯಾ ಪ್ರಕಟಿಸಿದ VVS ಲಕ್ಷ್ಮಣ್!

ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 4 ವಿಕೆಟ್ ನಷ್ಟಕ್ಕೆ 160 ರನ್ ಸಿಡಿಸಿತು. ಈ ಗುರಿ ಬೆನ್ನಟ್ಟಿದ ಭಾರತ ಮಹಿಳಾ ತಂಡ 4 ವಿಕೆಟ್ ನಷ್ಟಕ್ಕೆ 119 ರನ್ ಸಿಡಿಸಿತು. ಇದರೊಂದಿಗೆ ಇಂಗ್ಲೆಂಡ್ 41 ರನ್ ಗೆಲುವು ಸಾಧಿಸಿತು.
 

click me!