ಆಸ್ಟ್ರೇಲಿಯಾಗೆ 168 ರನ್ ಟಾರ್ಗೆಟ್ ನೀಡಿದ ಭಾರತದ ವನಿತೆಯರು!

By Web DeskFirst Published Nov 17, 2018, 10:10 PM IST
Highlights

ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ  ಸೆಮಿಫೈನಲ್ ಪ್ರವೇಶಿಸಿರುವ ಭಾರತದ ವನಿತೆಯರು ಇದೀಗ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕಾಗಿ ಆಸ್ಟ್ರೇಲಿಯಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಇನ್ನಿಂಗ್ಸ್ ಅಪ್‌ಡೇಟ್ಸ್ ಇಲ್ಲಿದೆ.

ಗಯಾನ(ನ.17): ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕಾಗಿ ಭಾರತ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಹೋರಾಟ ನಡೆಸುತ್ತಿದೆ.  ನಿಗಧಿತ 20 ಓವರ್‌ಗಳಲ್ಲಿ ಭಾರತ 8 ವಿಕೆಟ್ ನಷ್ಟಕ್ಕೆ 167 ರನ್ ಸಿಡಿಸಿದೆ. ಈ ಮೂಲಕ ಆಸ್ಟ್ರೇಲಿಯಾ ಗೆಲುವಿಗೆ 168 ರನ್ ಟಾರ್ಗೆಟ್ ನೀಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಭಾರತ ಆರಂಭದಲ್ಲೇ ತಾನಿಯಾ ಭಾಟಿಯಾ ವಿಕೆಟ್ ಕಳೆದುಕೊಂಡಿತು. ಆದರೆ ಸ್ಮೃತಿ ಮಂದಾನ ದಿಟ್ಟ ಹೋರಾಟ ನೀಡಿದರು. ಜೆಮಿಮಾ ರೋಡ್ರಿಗ್ರಸ್ ಕೇವಲ 6 ರನ್ ಸಿಡಿಸಿ ಔಟಾದರು.

ಹರ್ಮನ್‌ಪ್ರೀತ್ ಕೌರ್ ಹಾಗೂ ಸ್ಮೃತಿ ಮಂದಾನ ಜೊತೆಯಾಟದಿಂದ ಭಾರತ ಚೇತರಿಸಿಕೊಂಡಿತು.  ಆದರೆ ಹರ್ಮನ್‌ಪ್ರೀತ್ 43 ರನ್ ಸಿಡಿಸಿ ಔಟಾದರು. ಉತ್ತಮ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ಅರ್ಧಶತಕ ಸಿಡಿಸಿದರು.

ಕನ್ನಡತಿ ವೇದಾ ಕೃಷ್ಣಮೂರ್ತಿ, ದಯಾಲನ್ ಹೇಮಲತಾ ನಿರಾಸೆ ಮೂಡಿಸಿದರು. ಆದರೆ ಏಕಾಂಗಿ ಹೋರಾಟ ನೀಡಿದ ಸ್ಮೃತಿ ಮಂದನಾ 83 ರನ್ ಸಿಡಿಸಿ ಔಟಾದರು. ಮಂದಾನ ಅಬ್ಬರಿಂದ ಭಾರತ 8 ವಿಕೆಟ್ ನಷ್ಟಕ್ಕೆ 167 ರನ್ ಸಿಡಿಸಿತು. ಈ ಮೂಲಕ ಆಸ್ಟ್ರೇಲಿಯಾ ಗೆಲುವಿಗೆ 168 ರನ್ ಟಾರ್ಗೆಟ್ ನೀಡಿದೆ.
 

click me!