ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ

Published : Nov 11, 2018, 08:12 PM IST
ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ

ಸಾರಾಂಶ

ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಭಾರತದ ವನಿತೆಯರು ಇದೀಗ ಬದ್ಧವೈರಿ ಪಾಕಿಸ್ತಾನ ವಿರುದ್ಧದ ಹೋರಾಟಕ್ಕೆ ರೆಡಿಯಾಗಿದ್ದಾರೆ. ಈಗಾಗಲೇ ಟಾಸ್ ಪ್ರಕ್ರಿಯೆ ಮುಗಿದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ.

ಗಯಾನ(ನ.11): ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡವನ್ನ ಮಣಿಸಿದ ಭಾರತ ಇದೀಗ ಪಾಕಿಸ್ತಾನಕ್ಕೆ ಶಾಕ್ ನೀಡಲು ರೆಡಿಯಾಗಿದೆ. ಪಾಕ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಂ ಇಂಡಿಯಾ ಮಹಿಳಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಪಾಕ್ ವಿರುದ್ಧವೂ ಕಣಕ್ಕಿಳಿಯಲಿದೆ. 

 

 

ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ 49 ಎಸೆತದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಈ ಪಂದ್ಯದಲ್ಲಿ ಭಾರತ 34 ರನ್‌ಗಳ ಗೆಲುವು ಸಾಧಿಸಿತ್ತು. ಇದೀಗ ಪಾಕಿಸ್ತಾನ ವಿರುದ್ಧ ಗೆಲುವಿನ ವಿಶ್ವಾಸದಲ್ಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Asian Games 2026: 17 ಪದಕ ಗೆದ್ದರೂ 15ನೇ ಸ್ಥಾನಕ್ಕೆ ಕುಸಿದ ಭಾರತ..! ಶೂಟಿಂಗ್‌ನಲ್ಲಿ 5ನೇ ದಿನವೂ ಸಿಗಲಿಲ್ಲ ಬಂಗಾರ!
'ಆ ರಾತ್ರಿ ನನಗೆ ನಿದ್ದೆ ಬರಲಿಲ್ಲ' ಸೂರ್ಯವಂಶಿಗಾಗಿ ಸಂಜು ಔಟ್ ಆದ್ನಾ? ಗಂಭೀರ್ ಬಿಚ್ಚಿಟ್ರು ರಹಸ್ಯ