2022ರ ಕಾಮನ್‌ವೆಲ್ತ್‌ ಗೇಮ್ಸ್‌ಗೆ ಮಹಿಳಾ ಟಿ20 ಕ್ರಿಕೆಟ್

Published : Aug 14, 2019, 01:08 PM IST
2022ರ ಕಾಮನ್‌ವೆಲ್ತ್‌ ಗೇಮ್ಸ್‌ಗೆ ಮಹಿಳಾ ಟಿ20 ಕ್ರಿಕೆಟ್

ಸಾರಾಂಶ

2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಟಿ20 ಕ್ರಿಕೆಟ್‌ಗೆ ಅವಕಾಶ ಕಲ್ಪಿಸಲಾಗಿದೆ. 8 ತಂಡಗಳು ಟೂರ್ನಿಯಲ್ಲಿ ಕಾದಾಡಲಿದ್ದು, ಭಾರತ ತಂಡವು ಕಣಕ್ಕಿಳಿಯಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ನವದೆಹಲಿ(ಆ.14): ಮಹಿಳಾ ಟಿ-20 ಕ್ರಿಕೆಟ್‌ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ 2022ರ ಕಾಮನ್‌ವೆಲ್ತ್‌ ಗೇಮ್ಸ್‌ನ ಅಂಗ​ವಾ​ಗ​ಲಿ​ದೆ​ಯೆಂದು ಕಾಮನ್‌ವೆಲ್ತ್‌ ಗೇಮ್ಸ್‌ ಫೆಡರೇಷನ್‌ (ಸಿಜಿಎಫ್‌) ಮಂಗಳವಾರ ಅಧಿಕೃತವಾಗಿ ಘೋಷಿಸಿದೆ. 

ಕ್ರಿಕೆಟ್ ಅಭಿಮಾನಿಗಳಿಗಿದು ಸಿಹಿ ಸುದ್ದಿ: ದಶಕಗಳ ಕನಸು ನನಸು..?

ಗೇಮ್ಸ್‌ನಲ್ಲಿ ಮಹಿಳಾ ಟಿ-20 ಕ್ರಿಕೆಟ್‌ ಆಯೋಜನೆಗೆ ಐಸಿಸಿ, ಇಂಗ್ಲೆಂಡ್‌ ಕ್ರಿಕೆಟ್‌ ಸಂಸ್ಥೆ (ಇಸಿಬಿ) ಜಂಟಿ ಬಿಡ್‌ ಸಲ್ಲಸಿದ್ದವು. 1998ರ ಬಳಿಕ ಇದೇ ಮೊದಲ ಬಾರಿಗೆ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಸ್ಥಾನ ಸಿಕ್ಕಿದೆ. 8 ತಂಡಗಳು ಸ್ಪರ್ಧಿಸಲಿವೆ ಎಂದು ಸಿಜಿಎಫ್‌ ತಿಳಿಸಿದೆ. 8 ದಿನಗಳ ಕಾಲ ಕ್ರಿಕೆಟ್‌ ಸ್ಪರ್ಧೆ ನಡೆಯಲಿದ್ದು, ಎಲ್ಲಾ ಪಂದ್ಯಗಳು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿವೆ. ಬಿಸಿಸಿಐ ಸಹ ಈಗ ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗಳಲ್ಲಿ ಒಂದೆನಿಸಿರುವ ಕಾರಣ, ಭಾರತ ತಂಡವನ್ನೂ ಕ್ರೀಡಾಕೂಟಕ್ಕೆ ಕಳುಹಿಸುವ ನಿರೀಕ್ಷೆ ಇದೆ. 1998ರಲ್ಲಿ ಕೌಲಾಲಂಪುರದಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ಪುರುಷರ ಏಕದಿನ ಕ್ರಿಕೆಟ್‌ ಸೇರ್ಪಡೆಗೊಳಿಸಲಾಗಿತ್ತು. ದಕ್ಷಿಣ ಆಫ್ರಿಕಾ ತಂಡ ಚಿನ್ನದ ಪದಕ ಜಯಿಸಿತ್ತು.

ಶೂಟಿಂಗ್‌ಗೆ ಜಾಗವಿಲ್ಲ!

ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಬಹಿಷ್ಕಾರ ಹಾಕುವ ಭಾರತದ ಬೆದರಿಕೆಗೆ ಸಿಜಿಎಫ್‌ ಸೊಪ್ಪು ಹಾಕಿಲ್ಲ. ಬರ್ಮಿಂಗ್‌ಹ್ಯಾಮ್‌ ಗೇಮ್ಸ್‌ಗೆ ಮತ್ತ್ಯಾವುದೇ ಕ್ರೀಡೆ ಸೇರಿಸಲು ಜಾಗವಿಲ್ಲ ಎನ್ನುವ ಮೂಲಕ ಸಿಜಿಎಫ್‌, ಶೂಟಿಂಗ್‌ ಮರು ಸೇರ್ಪಡೆ ವಿಚಾರಕ್ಕೆ ಪೂರ್ಣವಿರಾಮವಿಟ್ಟಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್