ವಿಶ್ವ ಚಾಂಪಿಯನ್‌ಶಿಪ್: ಪ್ರಿ ಕ್ವಾರ್ಟರ್‌ಗೆ ಸೈನಾ, ಸಿಂಧು!

Published : Aug 22, 2019, 10:57 AM IST
ವಿಶ್ವ ಚಾಂಪಿಯನ್‌ಶಿಪ್: ಪ್ರಿ ಕ್ವಾರ್ಟರ್‌ಗೆ ಸೈನಾ, ಸಿಂಧು!

ಸಾರಾಂಶ

ವಿಶ್ವ ಚಾಂಪಿಯನ್‌ಶಿಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್‌ಗಳು ಮಿಂಚಿನ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಪ್ರಸಸ್ತಿ ಭರವಸೆ ಮೂಡಿಸಿದ್ದಾರೆ. 

ಬಾಸೆಲ್‌(ಸ್ವಿಜರ್‌ಲೆಂಡ್‌)ಆ.22 : ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು, ಸೈನಾ ನೆಹ್ವಾಲ್‌ ಹಾಗೂ ಕಿದಂಬಿ ಶ್ರೀಕಾಂತ್‌ ಬುಧವಾರ ವಿಶ್ವ ಚಾಂಪಿಯನ್‌ಶಿಪ್‌ನ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧು ದಾಖಲೆಯ 17ನೇ ಜಯ ಸಾಧಿಸಿದ್ದು, ಅತಿಹೆಚ್ಚು ಪಂದ್ಯ ಗೆದ್ದ ಸ್ಪೇನ್‌ನ ಕ್ಯಾರೋಲಿನಾ ಮರಿನ್‌ರ ದಾಖಲೆ ಸರಿಗಟ್ಟಿದರು. 

ಇದನ್ನೂ ಓದಿ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌: ಲಿನ್ ಡಾನ್‌ಗೆ ಆಘಾತ ನೀಡಿದ ಪ್ರಣಯ್‌!

ಮೊದಲ ಸುತ್ತಿನ ಬೈ ಪಡೆದಿದ್ದ ಸಿಂಧು, 2ನೇ ಸುತ್ತಿನಲ್ಲಿ ಚೈನೀಸ್‌ ತೈಪೆಯ ಪೈ ಯು ಪೊ ವಿರುದ್ಧ 21-14, 21-14 ನೇರ ಗೇಮ್‌ಗಳಿಂದ ಗೆದ್ದರು. ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ 9ನೇ ಶ್ರೇಯಾಂಕಿತೆ ಅಮೆರಿಕದ ಬೀವೆನ್‌ ಝಾಂಗ್‌ರನ್ನು ಎದುರಿಸಲಿದ್ದಾರೆ. ಡಚ್‌ ಎದುರಾಳಿ ಸೊರಯಾ ವಿರುದ್ಧ 21-10, 21-11 ನೇರ ಗೇಮ್‌ಗಳಿಂದ ಸೈನಾ ಜಯಿಸಿದರು. ಇಸ್ರೇಲ್‌ನ ಮಿಶ ಝಿಲ್ಬರ್‌ಮ್ಯಾನ್‌ ವಿರುದ್ಧ ಶ್ರೀಕಾಂತ್‌ ಪ್ರಯಾಸದ 13-21, 21-13, 18-11ರಿಂದ ಜಯಿಸಿದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL Playoffs: ಒಂದೇ ಸ್ಥಾನ, 4 ತಂಡಗಳ ಫೈಟ್! ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್?
ಚೇಸ್ ಮಾಡಿ ಗೆಲ್ಲೋ ಚಾನ್ಸ್ ಇದ್ದರೂ 166 ರನ್ ದಾಟಿಸಲು ಪ್ರಯತ್ನಿಸಿ ಸೋಲು ಕಂಡಿತಾ ಆರ್‌ಸಿಬಿ?