
ಲಂಡನ್(ಮೇ.15): ಐಸಿಸಿ ಏಕದಿನ ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿದ್ದು, ಟೂರ್ನಿ ವೇಳೆ ಭ್ರಷ್ಟಾಚಾರ ತಡೆಯಲು ಹೊಸ ಯೋಜನೆ ರೂಪಿಸಿದೆ. ಇದೇ ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಎಲ್ಲಾ 10 ತಂಡಗಳಿಗೆ ಪ್ರತ್ಯೇಕ ಭ್ರಷ್ಟಾಚಾರ ನಿಯಂತ್ರಣ ಅಧಿಕಾರಿಯನ್ನು ಐಸಿಸಿ ನೇಮಿಸಲಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಧೋನಿ ವಿರುದ್ಧ ತಿರುಗಿ ಬಿದ್ರಾ ಕುಲ್ದೀಪ್ ಯಾದವ್?
ಅಭ್ಯಾಸ ಪಂದ್ಯದಿಂದ ಹಿಡಿದು ಟೂರ್ನಿ ಕೊನೆಗೊಳ್ಳುವ ವರೆಗೂ ಆ ಅಧಿಕಾರಿ ತಂಡದೊಂದಿಗೆ ಇರಲಿದ್ದಾರೆ. ಈ ಮೊದಲು ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಅಧಿಕಾರಿಗಳು ಇರುತ್ತಿದ್ದರು. ಆದರೆ ಈ ಬಾರಿ ಅಧಿಕಾರಿಗಳು ತಂಡದೊಂದಿಗೆ ಪ್ರಯಾಣಿಸಲಿದ್ದು, ಆಟಗಾರರು ಉಳಿದುಕೊಳ್ಳುವ ಹೋಟೆಲ್‌ನಲ್ಲೇ ಉಳಿದುಕೊಳ್ಳಲಿದ್ದಾರೆ. ಪಂದ್ಯಗಳ ನಡುವೆ ಅಭ್ಯಾಸ, ಪತ್ರಿಕಾಗೋಷ್ಠಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳ ವೇಳೆಯೂ ಆಟಗಾರರ ಜತೆ ಅಧಿಕಾರಿ ತೆರಳಲಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳು ಆಟಗಾರರನ್ನು ಭೇಟಿ ಮಾಡುವುದನ್ನು ತಪ್ಪಿಸಲು ಐಸಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.