
ಮುಂಬೈ(ಏ.14): ಐಪಿಎಲ್ ಟೂರ್ನಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಬ್ಯುಸಿಯಾಗಿದ್ದಾರೆ. ಸೋಮವಾರ(ಏ.15) ರಂದು 2019ರ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ನಡೆಯಲಿದೆ. ಆಯ್ಕೆ ಸಮಿತಿ ಪ್ರಕಟಣೆಗಾಗಿ ಈಗಾಗಲೇ ಅಭಿಮಾನಿಗಳು ಕಾತರರಾಗಿದ್ದಾರೆ. ಇದರ ಜೊತೆಗೆ ಯಾರು ತಂಡ ಸೇರಿಕೊಳ್ಳಲಿದ್ದಾರೆ ಅನ್ನೋ ಚರ್ಚೆ ಶುರುವಾಗಿದೆ.
ಇದನ್ನೂ ಓದಿ: ವಿಶ್ವಕಪ್ 2019: ಇಲ್ಲಿದೆ ಟೀಂ ಇಂಡಿಯಾ 15 ಸದಸ್ಯರ ಸಂಭಾವ್ಯ ತಂಡ!
ಎಂ.ಎಸ್.ಧೋನಿಗೆ ಬ್ಯಾಕ್ ಆಪ್ ವಿಕೆಟ್ ಕೀಪರ್ ಆಗಿ ಯಾರು ಆಯ್ಕೆಯಾಗುತ್ತಾರೆ ಅನ್ನೋ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಆಯ್ಕೆ ಸಮಿತಿ 2 ಆಯ್ಕೆ ಇದೆ. ದಿನೇಶ್ ಕಾರ್ತಿಕ್ ಅಥವಾ ರಿಷಬ್ ಪಂತ್. ಇವರಿಬ್ಬರಲ್ಲಿ ಯಾರು ಬೆಸ್ಟ್ ಅನ್ನೋದೇ ಸದ್ಯದ ಪ್ರಶ್ನೆ.
ಇದನ್ನೂ ಓದಿ: ವಿಶ್ವಕಪ್ ಟೂರ್ನಿಗೆ ಸೆಹ್ವಾಗ್ ಕನಸಿನ ತಂಡ ಪ್ರಕಟ
ದಿನೇಶ್ ಕಾರ್ತಿಕ್ ಅಗತ್ಯ ಬಿದ್ದಾಗ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಇನ್ನಿಂಗ್ಸ್ ಕಟ್ಟಬಲ್ಲರು. ಆದರೆ ಫಾರ್ಮ್ ಸಮಸ್ಯೆ. ಇತ್ತ ಸ್ಫೋಟಕ ಬ್ಯಾಟ್ಸ್‌ಮನ್ ರಿಷಬ್ ಪಂತ್‍ಗೆ ತಾಳ್ಮೆ ಸಮಸ್ಯೆ. ಹೀಗಾಗಿ ಇವರಿಬ್ಬರ ನಡುವೆ ತೀವ್ರ ಪೈಪೋಟಿ ಇದೆ. ಇವರಿಲ್ಲಿ ಆಯ್ಕೆ ಸಮಿತಿ ಯಾರಿಗೆ ಮಣೆ ಹಾಕುತ್ತೆ? ಅಥವಾ ಇವರಿಬ್ಬರ ಬದಲು ಹೊಸ ಆಯ್ಕೆ ನಡೆಯುತ್ತಾ? ಈ ಎಲ್ಲಾ ಪ್ರಶ್ನೆಗೆ ಸೋಮವಾರ ಉತ್ತರ ಸಿಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.