ವಿಶ್ವಕಪ್ 2019: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ

Published : May 30, 2019, 02:40 PM ISTUpdated : Jul 01, 2019, 04:53 PM IST
ವಿಶ್ವಕಪ್ 2019: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ

ಸಾರಾಂಶ

ಚೊಚ್ಚಲ ವಿಶ್ವಕಪ್ ಕನವರಿಕೆಯಲ್ಲಿರುವ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿವೆ. ಇಂಗ್ಲೆಂಡ್ ಎದುರು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿದೆ.

ಲಂಡನ್[ಮೇ.30]: 12ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿದೆ. ಚೊಚ್ಚಲ ವಿಶ್ವಕಪ್ ಕನವರಿಕೆಯಲ್ಲಿರುವ ಉಭಯ ತಂಡಗಳು ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿವೆ.

ಗಾಯದಿಂದ ಚೇತರಿಸಿಕೊಂಡಿರುವ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಆತಿಥೇಯ ತಂಡವನ್ನು ಮುನ್ನಡೆಸಲಿದ್ದು 6 ಬಲಿಷ್ಠ ಬ್ಯಾಟ್ಸ್ಮನ್ಗಳು  2 ಆಲ್ರೌಂಡರ್ ಹಾಗೂ 1 ಸ್ಪಿನ್ನರ್ ಮತ್ತು 2 ತಜ್ಞ ವೇಗಿಗಳೊಂದಿಗೆ ಕಣಕ್ಕಿಳಿಯುತ್ತಿದೆ. ಇಯಾನ್ ಮಾರ್ಗನ್ ಇಂದು ಇಂಗ್ಲೆಂಡ್ ಪರ 200ನೇ ಪಂದ್ಯವನ್ನಾಡುತ್ತಿದ್ದು, ಆಂಗ್ಲರ ಪರ 200 ಪಂದ್ಯವನ್ನಾಡಿದ ಮೊದಲ ಕ್ರಿಕೆಟಿಗ ಎನ್ನುವ ಕೀರ್ತಿಗೆ ಭಾಜನರಾಗಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ತಂಡವನ್ನು ಫಾಫ್ ಡು ಪ್ಲಸೀಸ್ ಮುನ್ನಡೆಸುತ್ತಿದ್ದು, ಅನುಭವಿ ಬ್ಯಾಟ್ಸ್ಮನ್ಗಳಾದ ಹಾಶೀಂ ಆಮ್ಲಾ, ಕ್ವಿಂಟನ್ ಡಿಕಾಕ್, ಜೆಪಿ ಡುಮಿನಿ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಅನುಭವಿ ಸ್ಪಿನ್ನರ್ ಇಮ್ರಾನ್ ತಾಹೀರ್ ವೇಗಿಗಳಾದ ಕಗಿಸೋ ರಬಾಡ, ಲುಂಗಿ ಎನ್‌ಗಿಡಿ ಮಾರಕ ದಾಳಿ ನಡೆಸಿದರೆ ಆತಿಥೇಯರಿಗೆ ಆಘಾತ ನೀಡುವುದು ಕಷ್ಟವೇನಲ್ಲ.

ತಂಡಗಳು ಹೀಗಿವೆ:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು
ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!