
ಲಂಡನ್[ಜೂ.10]: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗರೂ ಪಡೆಯ ಸತತ 10 ಗೆಲುವುಗಳ ನಾಗಾಲೋಟಕ್ಕೆ ಟೀಂ ಇಂಡಿಯಾ ಬ್ರೇಕ್ ಹಾಕಿದೆ.
ಹಾರ್ದಿಕ್ ಪಾಂಡ್ಯ ವಿಕೆಟ್ ಪತನದ ಬಳಿಕ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಅನುಭವಿ ಕ್ರಿಕೆಟಿಗ ಎಂ.ಎಸ್ ಧೋನಿ ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದರು. 49ನೇ ಓವರ್ ಬೌಲಿಂಗ್ ಮಾಡಿದ ಆಸಿಸ್ ಮಾರಕ ವೇಗಿ ಮಿಚೆಲ್ ಸ್ಟಾರ್ಕ್ ಎಸೆತವನ್ನು ಧೋನಿ ಅನಾಯಾಸವಾಗಿ ಸಿಕ್ಸರ್ ಗೆರೆ ದಾಟಿಸಿದರು. ಈ ವೇಳೆ ನಾನ್ ಸ್ಟ್ರೈಕರ್’ನಲ್ಲಿದ್ದ ನಾಯಕ ಕೊಹ್ಲಿ ತಬ್ಬಿಬ್ಬಾಗಿ ಹೋಗಿದ್ದಾರೆ. ಇದೀಗ ಕೊಹ್ಲಿಯ ಪ್ರತಿಕ್ರಿಯೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಹೀಗಿತ್ತು ನೋಡಿ ಆ ಕ್ಷಣ...
ಮೊದಲು ಬ್ಯಾಟ್ ಮಾಡಿದ್ದ ಭಾರತ ಶಿಖರ್ ಧವನ್ ಆಕರ್ಷಕ ಶತಕ ಹಾಗೂ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸಮಯೋಚಿತ ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 352 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಆಸ್ಟ್ರೇಲಿಯಾ 316 ರನ್ ಗಳಿಗೆ ಸರ್ವಪತನ ಕಾಣುವುದರ ಮೂಲಕ 36 ರನ್ ಗಳ ಸೋಲು ಕಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.