World Cup Flashback: 28 ವರ್ಷಗಳ ಬಳಿಕ ಇತಿಹಾಸ ಬರೆದಿದ್ದ ಟೀಂ ಇಂಡಿಯಾ

Published : May 27, 2019, 01:45 PM IST
World Cup Flashback: 28 ವರ್ಷಗಳ ಬಳಿಕ ಇತಿಹಾಸ ಬರೆದಿದ್ದ ಟೀಂ ಇಂಡಿಯಾ

ಸಾರಾಂಶ

ಟೀಂ ಇಂಡಿಯಾ 28 ವರ್ಷಗಳ ಬಳಿಕ 2011ರಲ್ಲಿ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ತವರಿನಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡವೆಂದು ದಾಖಲೆ ಬರೆದ ಟೀಂ ಇಂಡಿಯಾದ ವಿಶ್ವಕಪ್ ಪಯಣದ ಪ್ಲಾಶ್‌ಬ್ಯಾಕ್ ಇಲ್ಲಿದೆ ನೋಡಿ...

ಬೆಂಗಳೂರು[ಮೇ.27]: ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದಲ್ಲಿ ನಡೆದ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ 2ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಇದರ ಜತೆಗೆ ತವರಿನಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎನ್ನುವ ಕೀರ್ತಿಗೆ ಟೀಂ ಇಂಡಿಯಾ ಪಾತ್ರವಾಗಿತ್ತು. 

ಏಕದಿನ ವಿಶ್ವಕಪ್ ಟೂರ್ನಿಯ ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...

14 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ 2 ಗುಂಪುಗಳಾಗಿ ವಿಂಗಡಿಸಲಾಗಿತ್ತು. ತಲಾ 7 ತಂಡಗಳು ಒಂದೊಂದು ಗುಂಪಿನಲ್ಲಿದ್ದವು. ಎರಡೂ ಗುಂಪಿನ ಅಗ್ರ 4 ತಂಡಗಳು ಸೂಪರ್ 8 ಹಂತಕ್ಕೆ ಪ್ರವೇಶಿಸಿದವು. ಸೂಪರ್ 8ರ ಹಂತದಲ್ಲಿ ವಿಂಡೀಸ್, ಆಸ್ಟ್ರೇಲಿಯಾ, ದ.ಆಫ್ರಿಕಾ ಹಾಗೂ ಇಂಗ್ಲೆಂಡ್ ಸೋತು ಹೊರಬಿದ್ದವು.

ಭಾರತ, ಪಾಕಿಸ್ತಾನ, ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ಸೆಮೀಸ್ಗೇರಿದವು. ಪಾಕಿಸ್ತಾನವನ್ನು ಬಗ್ಗುಬಡಿದ ಭಾರತ, ನ್ಯೂಜಿಲೆಂಡ್ನ್ನು ಸೋಲಿಸಿದ ಶ್ರೀಲಂಕಾ ಫೈನಲ್ ತಲುಪಿದವು. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್’ನಲ್ಲಿ ಶ್ರೀಲಂಕಾವನ್ನು 6 ವಿಕೆಟ್’ಗಳಿಂದ ಸೋಲಿಸಿದ ಭಾರತ ಟ್ರೋಫಿ ಎತ್ತಿ ಹಿಡಿಯಿತು.

ಈ ಗೆಲುವಿನೊಂದಿಗೆ ಬರೋಬ್ಬರಿ 28 ವರ್ಷಗಳ ಬಳಿಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿದು ಸಂಭ್ರಮಿಸಿತ್ತು. ಈ ಮೊದಲು 1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಜಯಿಸಿತ್ತು. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಪ್‌ ತುಳಿತ ತನಿಖಾ ವರದಿ ಹೈಕೋರ್ಟ್‌ ಪರಾಮರ್ಶೆಗೆ
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!