
ವೆಸ್ಟ್‌ಇಂಡೀಸ್‌ನಲ್ಲಿ ನಡೆದ 2007ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಪ್ರೇಲಿಯಾ ಚಾಂಪಿಯನ್ ಆಗಿ, ಸತತ 3ನೇ ಬಾರಿಗೆ ಟ್ರೋಫಿ ಗೆದ್ದ ಸಾಧನೆ ಮಾಡಿತು. 16 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ತಲಾ 4 ತಂಡಗಳಂತೆ 4 ಗುಂಪುಗಳಾಗಿ ವಿಂಗಡಿಸಲಾಗಿತ್ತು. ಪ್ರತಿ ಗುಂಪಿನಲ್ಲಿ ಅಗ್ರ 2 ಸ್ಥಾನ ಪಡೆದ ತಂಡಗಳು ಸೂಪರ್ 8 ಹಂತಕ್ಕೆ ಪ್ರವೇಶಿಸಿದವು.
ಇದನ್ನೂ ಓದಿ: ವಿಶ್ವಕಪ್ 2019: ಫಿಕ್ಸಿಂಗ್ ಶಂಕೆಯಿಂದ ಭಾರತದ 2 ಪತ್ರಕರ್ತರಿಗೆ ನಿಷೇಧ!
ಭಾರತ ಹಾಗೂ ಪಾಕಿಸ್ತಾನ ಗುಂಪು ಹಂತದಲ್ಲೇ ಹೊರಬಿದ್ದು ಅಭಿಮಾನಿಗಳಲ್ಲಿ ಆಘಾತ ಮೂಡಿಸಿದವು. ಆಸ್ಪ್ರೇಲಿಯಾ, ನ್ಯೂಜಿಲೆಂಡ್, ಶ್ರೀಲಂಕಾ ಹಾಗೂ ದ.ಆಫ್ರಿಕಾ ಸೆಮಿಫೈನಲ್ ಪ್ರವೇಶಿಸಿದವು. ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಡಕ್ವತ್‌ರ್ ಲೂಯಿಸ್ ನಿಯಮದನ್ವಯ 53 ರನ್ ಗೆಲುವು ಸಾಧಿಸಿದ ಆಸೀಸ್, 4ನೇ ಬಾರಿ ಚಾಂಪಿಯನ್ ಆಯಿತು.
ಚಾಂಪಿಯನ್: ಆಸ್ಪ್ರೇಲಿಯಾ
ರನ್ನರ್-ಅಪ್: ಶ್ರೀಲಂಕಾ
ಭಾರತದ ಸಾಧನೆ: ಗುಂಪು ಹಂತದಲ್ಲೇ ಔಟ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.