
ನವದೆಹಲಿ(ಆ.21): ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಸತತವಾಗಿ ಹಿನ್ನಡೆ ಅನುಭವಿಸುತ್ತಿರುವ ಭಾರತದ ದಿಗ್ಗಜ ಕುಸ್ತಿಪಟು ಸುಶೀಲ್ ಕುಮಾರ್, ಸೆ.14ರಿಂದ ಕಜಕಸ್ತಾನದಲ್ಲಿ ನಡೆಯಲಿರುವ ಕುಸ್ತಿ ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ.
ಹೇಳದೆ ಕೇಳದೆ ಶಿಬಿರ ತೊರೆದ ಸಾಕ್ಷಿಗೆ ಕುಸ್ತಿ ಫೆಡರೇಷನ್ ಚಾಟಿ!
ಮಂಗಳವಾರ ಇಲ್ಲಿನ ಐಜಿಐ ಕ್ರೀಡಾಂಗಣದಲ್ಲಿ ನಡೆದ ಭಾರತ ಕುಸ್ತಿ ಫೆಡರೇಷನ್‌ನ ಆಯ್ಕೆ ಟ್ರಯಲ್ಸ್‌ನಲ್ಲಿ 74 ಕೆ.ಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಸುಶೀಲ್4-2 ಅಂಕಗಳಲ್ಲಿ ಜಿತೇಂದ್ರ ಕುಮಾರ್ ವಿರುದ್ಧ ಗೆಲುವು ಸಾಧಿಸಿ, ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದರು. ಸುಶೀಲ್ ಪಂದ್ಯ ವೀಕ್ಷಿಸಲು ಸುಮಾರು 1500 ಅಭಿಮಾನಿಗಳು ಆಗಮಿಸಿದ್ದು ವಿಶೇಷ.
45 ದಿನಗಳಲ್ಲಿ 6 ಚಿನ್ನ ಗೆದ್ದ ಹಿಮಾ ದಾಸ್!
ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮೊದಲ ಸುತ್ತಿನಲ್ಲಿ 4-0 ಮುನ್ನಡೆ ಸಾಧಿಸಿದ್ದರು. ಎರಡನೇ ಸುತ್ತಿನಲ್ಲಿ ಜಿತೇಂದ್ರ ಕುಮಾರ್ 2 ಅಂಕಗಳಿಸಿದರಾದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. 36 ವರ್ಷದ ಸುಶೀಲ್ ಕುಮಾರ್ 2010ರಲ್ಲಿ ನಡೆದ ವಿಶ್ವ ಚಾಂಪಿಯನ್’ಶಿಪ್’ನಲ್ಲಿ 66 ಕೆ.ಜಿ ವಿಭಾಗದಲ್ಲಿ ಪದಕ ಜಯಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.