
ಕೊಲ್ಕತ್ತಾ(ನ.11): ಟೀಂ ಇಂಡಿಯಾ ಕ್ರಿಕೆಟ್‌ನಲ್ಲಿ ದಶಕಗಳ ಕಾಲ ವಿಕೆಟ್ ಕೀಪರ್ ಸಮಸ್ಯೆಯನ್ನ ನಿವಾರಿಸಿದ ಹೆಗ್ಗಳಿಕೆಗೆ ಎಂ.ಎಸ್ ಧೋನಿಗೆ ಸಲ್ಲಲಿದೆ. ಆದರೆ ಟೆಸ್ಟ್ ಕ್ರಿಕೆಟ್‌ಗೆ ಧೋನಿ ವಿದಾಯದ ಬಳಿಕ, ವೃದ್ಧಿಮಾನ್ ಸಾಹ ಭಾರತದ ಅತ್ಯುತ್ತಮ ವಿಕೆಟ್ ಕೀಪರ್ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ವೃದ್ಧಿಮಾನ ಸಾಹ ಶೀಘ್ರದಲ್ಲೇ ತಂಡಕ್ಕೆ ವಾಪಾಸ್ಸಾಗಲಿದ್ದಾರೆ. ಭುಜದ ನೋವಿನಿಂದ ವೃದ್ಧಿಮಾನ್ ಸಾಹ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಹೀಗಾಗಿ ಯುವ ವಿಕೆಟ್ ಕೀಪರ್ ರಿಷಬ್ ಪಂತ್‌ಗೆ ಅವಕಾಶ ಸಿಕ್ಕಿದೆ.
ಕಳೆದ 5 ರಿಂದ 10 ವರ್ಷ ವೃದ್ಧಿಮಾನ್ ಸಾಹ ಕೀಪಿಂಗ್ ಜವಾಬ್ದಾರಿಯನ್ನ ಅತ್ಯುತ್ತಮವಾಗಿ ನಿರ್ವಹಿಸುತ್ತಾರೆ. 2014ರಿಂದ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಖಾಯ ಸ್ಥಾನ ಪಡೆದ ಸಾಹ ಶ್ರೇಷ್ಠ ವಿಕೆಟ್ ಕೀಪರ್ ಆಗಿ ಹೊರಹೊಮ್ಮಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ.
32 ಟೆಸ್ಟ್ ಪಂದ್ಯದಿಂದ 1164 ರನ್ ಸಿಡಿಸಿರುವ ಸಾಹ 3 ಶತಕ ಕೂಡ ಭಾರಿಸಿದ್ದಾರೆ. ಈ ಮೂಲಕ ಬ್ಯಾಟಿಂಗ್‌ನಲ್ಲೂ ಉಪಯುಕ್ತ ಕಾಣಿಕೆ ನೀಡಿದ್ದಾರೆ. ಹೀಗಾಗಿ ಸಾಹ ಶೀಘ್ರವೇ ತಂಡಕ್ಕೆ ಕಮ್‌ಬ್ಯಾಕ್ ಮಾಡಬೇಕಿದೆ ಎಂದು ಗಂಗೂಲಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.