ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಕೆಲ ಬದಲಾವಣೆಗಳಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ರಿಷಬ್ ಪಂತ್‌ಗೆ ಕೊಕ್ ನೀಡಲು ಟೀಂ ಮ್ಯಾನೇಜ್ಮೆಂಟ್ ಮುಂದಾಗಿದೆ.
ವಿಶಾಖಪಟ್ಟಣಂ(ಸೆ.26): ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡೋ ಮೂಲಕ ತೀವ್ರ ಟೀಕೆಗೆ ಗುರಿಯಾಗಿರುವ ರಿಷಬ್ ಪಂತ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊದಲ ಟೆಸ್ಟ್ ಪಂದ್ಯದಿಂದ ಪಂತ್ ಕೈಬಿಡುವ ಸಾಧ್ಯತೆ ದಟ್ಟವಾಗುತ್ತಿದೆ. ರಿಷಬ್ ಪಂತ್ ಬದಲು ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಾಹಾಗೆ ಅವಕಾಶ ನೀಡಲು ಟೀಂ ಮ್ಯಾನೇಜ್ಮೆಂಟ್ ಮುಂದಾಗಿದೆ.
ಇದನ್ನೂ ಓದಿ: ಪಂತ್‌ಗೆ ಖಡಕ್ ಎಚ್ಚರಿಕೆ ಕೊಟ್ಟ ರವಿ ಶಾಸ್ತ್ರಿ!
ನಾಯಕ ವಿರಾಟ್ ಕೊಹ್ಲಿ, ಕೋಚ್ ರವಿಶಾಸ್ತ್ರಿ ಹಾಗೂ ಟೀಂ ಮ್ಯಾನೇಜ್ಮೆಂಟ್ ಈ ಕುರಿತು ಚರ್ಚೆ ನಡೆಸಿದ್ದಾರೆ. ಆಕ್ಟೋಬರ್ 2 ರಂದು ವಿಶಾಖಪಟ್ಟಣಂದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವೃದ್ಧಿಮಾನ್ ಸಾಹಾಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ಆದರೆ ಆಯ್ಕೆ ಸಮಿತಿ ಪಂತ್‌ಗೆ ಕೊನೆಯ ಅವಕಾಶ ನೀಡಬೇಕು ಎಂದು ಅಗ್ರಹಿಸಿದೆ.
ಇದನ್ನೂ ಓದಿ: ರಿಷಭ್ ಪಂತ್ ಕಳಪೆ ಬ್ಯಾಟಿಂಗ್; ಅಭಿಮಾನಿಗಳಿಂದ ಕ್ಲಾಸ್
ಟೆಸ್ಟ್ ಮಾದರಿಯಲ್ಲಿ ಸೆಂಚುರಿ ಸಿಡಿಸಿರುವ ಪಂತ್, ಸೌತ್ ಆಫ್ರಿಕಾ ವಿರುದ್ದ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಆಯ್ಕೆ ಸಮಿತಿ ಹೇಳಿದೆ. ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಂತ್‌ಗೆ ಅವಕಾಶ ನೀಡಿ, ಬಳಿಕ ನಿರ್ಧಾರ ಕೈಗೊಳ್ಳಲು ಆಯ್ಕೆ ಸಮಿತಿ ಸೂಚಿಸಿದೆ. ಆದರೆ ಕೊಹ್ಲಿ ಹಾಗೂ ಶಾಸ್ತ್ರಿ ಯಾವುದೇ ರಿಸ್ಕ್ ತೆಗೆದುಕೊಳ್ಳದಿರಲು ಮುಂದಾಗಿದ್ದಾರೆ.